ETV Bharat / state

ವಿಜಯನಗರ: ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು ಹೋದ ರೈತ - Etv bharat kannada

ಜಿ. ನಾಗಲಾಪುರ ಗ್ರಾಮದ ರೈತ ಉಂಚಟ್ಟಿ ಬೊಮ್ಮಪ್ಪ ಎಂಬುವವರು ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ.

A man was washed away in the water of a ditch
ಹಳ್ಳದ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ
author img

By

Published : Aug 2, 2022, 4:18 PM IST

ವಿಜಯನಗರ: ಹೊಸಪೇಟೆ ತಾಲೂಕಿನ ಗರಗ-ನಾಗಲಾಪುರ ಗ್ರಾಮದಲ್ಲಿ ಭಾರಿ ಮಳೆಗೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ರೈತ ಉಂಚಟ್ಟಿ ಬೊಮ್ಮಪ್ಪ (62) ಎಂಬುವವರು ಕೊಚ್ಚಿಕೊಂಡು ಹೋಗಿದ್ದಾರೆ. ಮಧ್ಯಾಹ್ನ ಹಳ್ಳದಲ್ಲಿ ನೀರಿನ ಹರಿವು ಸ್ವಲ್ಪ ತಗ್ಗಿದ್ದರಿಂದ ಬೊಮ್ಮಪ್ಪ ಹಳ್ಳ ದಾಟಿಕೊಂಡು ಹೊಲಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ನೀರಿನ ಸೆಳವಿಗೆ ಸಿಕ್ಕಿರುವ ಅವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹಳ್ಳದ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ

ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಕಂದಾಯ ನಿರೀಕ್ಷಕ ಅಂದಾನಗೌಡ, ಗ್ರಾಮ ಲೆಕ್ಕಿಗ ಬಸವರಾಜ, ಪಿ.ಡಿ.ಒ ರಾಘವೇಂದ್ರ, ಕೃಷಿ ಅಧಿಕಾರಿ ಶಿವಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಡಿ ಭಾಗದಲ್ಲಿ ಭಾರಿ ಮಳೆ: ಡೊನೆಕಲ್ ಗ್ರಾಮದ ಸೇತುವೆ ಮಧ್ಯೆ ಸಿಲುಕಿಕೊಂಡ ಲಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.