ಬಳ್ಳಾರಿ: ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಗೆ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ ಸಿಂಗ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಮುಂಚೆ ಈ ಸಮಿತಿಗೆ ಉಪಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಸಚಿವರು ಹಾಗೂ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಲಕ್ಷ್ಮಣ ಸಂಗಪ್ಪ ಸವದಿಯನ್ನು ನೇಮಕ ಮಾಡಲಾಗಿತ್ತು.
ಈಗ ಅವರ ಬದಲಿಗೆ ಸಚಿವ ಆನಂದಸಿಂಗ್ ಅವರನ್ನು ನೇಮಿಸಿ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ರಾಜ್ಯಪಾಲರಾದ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಆದೇಶ ಹೊರಡಿಸಿದ್ದಾರೆ.