ETV Bharat / state

ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ: ವರಸೆ ಬದಲಿಸಿದ ಸಚಿವ ಆನಂದ ಸಿಂಗ್! - Minister Anandasingh's statement about separate district of Vijayanagar

ವಿಜಯನಗರ ಪ್ರತ್ಯೇಕ ಜಿಲ್ಲೆಯ ಕನಸು ಮತ್ತು ಉಪಚುನಾವಣೆ ವೇಳೆ ಅದೇ ವಿಚಾರವನ್ನು ಮುನ್ನೆಲೆಗೆ ತಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಈಗ ಮಾತಿನ ವರಸೆ ಬದಲಾಯಿಸಿದ್ದಾರೆ.

minister-anandasinghs
ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್
author img

By

Published : Sep 17, 2020, 12:50 PM IST

ಬಳ್ಳಾರಿ: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಮ್ಮ ಈಗ ಮಾತಿನ ವರಸೆಯನ್ನು ಬದಲಿಸಿದ್ದಾರೆ.

ವರಸೆ ಬದಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್

ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿಂದು ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದಿನ ನಾವೆಲ್ಲರೂ ಅಣ್ಣ - ತಮ್ಮಂದಿರಂತೆ ಒಟ್ಟಿಗೆ ಇದ್ದೇವೆ. ನಮ್ಮಣ್ಣ ಇಲ್ಲೇ ಇದ್ದಾನೆ.‌ ಅಣ್ಣ ಹೇಳಿದಂತೆ ನಾನು ಕೇಳುತ್ತೇನೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿದೆ. ಅವರು ಈಗಾಗಲೇ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ಅವರಿಗೆ ಈ ವಿಚಾರವಾಗಿ ಕೈಮುಗಿದರು.

ಗಾಂಜಾ ಅಕ್ರಮದ ದೂರು‌ ನನ್ನ ಗಮನಕ್ಕೆ ಬಂದಿಲ್ಲ: ಡ್ರಗ್ಸ್​​ ಮಾಫಿಯಾದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ಗಮನಕ್ಕೆ ಬಂದಿಲ್ಲವೆಂದು ತಿಳಿಸಿದ್ದಾರೆ.

ಸಚಿವ ಸಂಪುಟದ ವಿಸ್ತರಣೆ ಸಲುವಾಗಿ ದೆಹಲಿಗೆ ಹೋದ್ರೆ ತಪ್ಪೇನಿಲ್ಲ: ಸಚಿವ ಸಂಪುಟದ ವಿಸ್ತರಣೆ ಸಲುವಾಗಿಯೇ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋದ್ರೆ ತಪ್ಪೇ‌ನಿಲ್ಲ. ಅವರು ನೆರೆಹಾವಳಿ ಪರಿಹಾರಕ್ಕಾಗಿ ಮನವಿ ಮಾಡಿಕೊಳ್ಳಲು ದೆಹಲಿಗೆ ಹೋಗುತ್ತಿದ್ದಾರೆ ಅಂತ ಮಾಹಿತಿಯಿದೆ. ರಾಜ್ಯ‌ ಸಚಿವ ಸಂಪುಟದ ವಿಸ್ತರಣೆ ವಿಚಾರವಾಗಿ ಸಿಎಂ ಬಿಎಸ್ ವೈ ದೆಹಲಿಗೆ ಹೋಗಲಿ ಬಿಡಿ ಎಂದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.