ಹೊಸಪೇಟೆ(ವಿಜಯನಗರ): ಅಣ್ಣಾಮಲೈ ಕರ್ನಾಟಕದವರಲ್ಲ, ತಮಿಳುನಾಡಿನವರು. ಹಾಗಾಗಿ, ಅವರ ರಾಜ್ಯದ ಪರವಾಗಿ ಮಾತನಾಡಿದ್ದಾರೆ. ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ನಗರದ ಟಿಬಿ ಡ್ಯಾಂ ವೈಕುಂಠ ಅತಿಥಿ ಗೃಹದಲ್ಲಿ ಮಾತನಾಡುತ್ತಾ, ನೀರು ಹಂಚಿಕೆ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಕುರಿತು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ನಡುವೆ ಸಭೆ ನಡೆಯಬೇಕಾಗಿದೆ. ಬಳಿಕ ಯೋಜನೆ ರೂಪುರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.
ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಸಂಸದರಾದ ಸಂಗಣ್ಣ ಕರಡಿ, ವೈ.ದೇವೇಂದ್ರಪ್ಪ, ಶಾಸಕ ಪರಣ್ಣ ಮುನವಳ್ಳಿ ಇತರರು ಹಾಜರಿದ್ದರು.
ಇದನ್ನೂ ಓದಿ: ಎಸ್ಕಾರ್ಟ್ ಇಲ್ಲದೇ ಸಚಿವರ ಓಡಾಟ: ಕುತೂಹಲ ಕೆರಳಿಸಿದ ಆನಂದ್ ಸಿಂಗ್ ನಡೆ