ETV Bharat / state

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಾತ್ರವಿಲ್ಲ: ಸಚಿವ ಶ್ರೀರಾಮುಲು - ballary news

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕುರಿತು ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

minister shriramulu reacts on Maharashtra political crisis
ಸಚಿವ ಶ್ರೀರಾಮುಲು
author img

By

Published : Jun 25, 2022, 3:54 PM IST

ಬಳ್ಳಾರಿ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಾತ್ರವಿಲ್ಲ. ನಾವು ಆಪರೇಷನ್ ಕಮಲ ಮಾಡುತ್ತಿಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುತ್ತಾರೆ ಎಂದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಅನ್ನೋ ಮಾಹಿತಿ ಇದೆ ಎಂದು ಬಳ್ಳಾರಿಯಲ್ಲಿ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ‌‌ ಇಲ್ಲಿನ ‌ಜಿಲ್ಲಾಧಿಕಾರಿ ಕಚೇರಿ ಎದುರು ರೈಲ್ವೆ ನಿಲ್ದಾಣದ ಬಳಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಬಿ.ಶ್ರೀರಾಮುಲು ಅವರು ಅನಾವರಣಗೊಳಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಈ ರೀತಿಯ ರಾಜಕೀಯ ಘಟನೆಗಳು ಬೇರೆ ಬೇರೆ ರಾಜ್ಯಗಳಲ್ಲಿ ನಡೆದಿವೆ. ಅಲ್ಲಿನ ಶಾಸಕರೇ ಆ ಸರ್ಕಾರದಲ್ಲಿ ಇರಲ್ಲ ಅಂದ ಮೇಲೆ ಮಹಾರಾಷ್ಟ್ರ ಸರ್ಕಾರ ಉಳಿಯುವ ಮಾತೇ ಇಲ್ಲ ಎಂದರು.

ಸಚಿವ ಶ್ರೀರಾಮುಲು

ಮನಸ್ಸು ಮಾಡಿದ್ರೆ ನಾನು ಒಂದು ದಿನ ಸಿಎಂ ಆಗುತ್ತೇನೆ ಎನ್ನುವ ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಅವರನ್ನೇ ಕೇಳಬೇಕು. ಈ ಹೇಳಿಕೆ ಬಿಜೆಪಿಯ ನಿಲುವಲ್ಲ. ಅದು ಅವರ ವೈಯಕ್ತಿಕ ಹೇಳಿಕೆ. ನಾನು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಇನ್ನೂ ನಿರ್ಧಾರ ಮಾಡಿಲ್ಲ. ನನ್ನ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ಸದ್ಯಕ್ಕೆ ಸೇವೆ ಮಾಡುವ ಅವಕಾಶವನ್ನು ಭಗವಂತ ನೀಡಿದ್ದಾನೆ ಎಂದು ಸಚಿವ ಶ್ರೀರಾಮುಲು ಹೇಳಿದ್ರು.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ವಿಪಕ್ಷದವರಿಂದ ರಾಜಕೀಯಕ್ಕಾಗಿ ಆರೋಪ ಎಂದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.