ಬಳ್ಳಾರಿ : ಗೋಹತ್ಯೆ ನಿಷೇಧ ಕಾಯಿದೆಯನ್ನ ಜಾರಿಗೆ ತಂದೇ ತೀರುತ್ತೇವೆ. ಅದನ್ನ ಯಾರಿಂದಲೂ ತಡೆಯೋಕೆ ಆಗೋಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಬಳ್ಳಾರಿಯ ಕೋರ್ಟ್ ರಸ್ತೆಯ ಕಮ್ಮ ಭವನದಲ್ಲಿಂದು ನಡೆದ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕೆಲ ನಾಯಕರು ಗೋಹತ್ಯೆ ನಿಷೇಧ ಕಾಯಿದೆಗೆ ವಿರೋಧ ವ್ಯಕ್ತಪಡಿಸಿದ್ದು ಬಿಟ್ಟರೆ, ಉಳಿದವರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಹೀಗಾಗಿ, ಗೋಹತ್ಯೆ ನಿಷೇಧ ಕಾಯಿದೆಯನ್ನ ಜಾರಿಗೆ ತರುತ್ತೇವೆ ಎಂದರು.
ಓದಿ: ನೆಲಮಂಗಲ : ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಹೋಮ್ ಅಪ್ಲೈಯನ್ಸ್ ಫ್ಯಾಕ್ಟರಿ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೋ ಹತ್ಯೆ ನಿಷೇಧ ಕಾಯಿದೆಯನ್ನ ಜಾರಿಗೆ ತರುವುದಾಗಿ ಹೇಳಿದ್ದು, ಅದರಂತೆ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಳೆದುಕೊಳ್ಳುತ್ತೇವೆ ಎಂಬ ಸ್ವಾರ್ಥ ರಾಜಕಾರಣಕ್ಕಾಗಿ, ಗೋ ಹತ್ಯೆ ನಿಷೇಧ ಕಾಯಿದೆ ವಿರೋಧಿಸುತ್ತಿದ್ದಾರೆ. ಪುಕ್ಕಟೆ ರಾಜಕಾರಣ, ಪ್ರಚಾರಕ್ಕಾಗಿ ಕಾಂಗ್ರೆಸ್ ವಿನಾಃ ಕಾರಣ ಈ ರೀತಿ ಆರೋಪ ಮಾಡುತ್ತಿದೆ ಎಂದರು.