ETV Bharat / state

ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರು.. ಆಪ್ತರ ನಡುವೆ ಬಿರುಕು? - ಬಿಜೆಪಿ ಮೇಲೆ ಜನಾರ್ದನ ರೆಡ್ಡಿಗೆ ಬೇಸರ

ಸಾಮಾನ್ಯವಾಗಿ ಜನಾರ್ದನ ರೆಡ್ಡಿ ಅವರ ಯಾವುದೇ ಕಾರ್ಯಕ್ರಮವಿದ್ದರೂ ಶ್ರೀ ರಾಮುಲು ಸ್ವಂತ ಸಹೋದರನಂತೆ ಹಾಜರಾಗುತ್ತಿದ್ದರು. ಯಾರಿಗೆ ಆಹ್ವಾನವಿಲ್ಲದಿದ್ದರೂ ಶ್ರೀರಾಮುಲುಗೆ ಆಹ್ವಾನ, ಪ್ರಾಮುಖ್ಯತೆ ಇದ್ದೇ ಇರುತ್ತಿತ್ತು. ಆದ್ರೆ ಇತ್ತೀಚೆಗೆ ನಡೆದ ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣ ಕಾರ್ಯಕ್ರಮಕ್ಕೆ ಸಚಿವ ಶ್ರೀರಾಮುಲು ಗೈರಾಗಿದ್ದಾರೆ. ಕಾರ್ಯಕ್ರಮಕ್ಕೆ ಬಿ ಎಸ್​ ಯಡಿಯೂರಪ್ಪ ಹೋದರೂ ಶ್ರೀರಾಮುಲು ಹೋಗಿಲ್ಲ. ಹೀಗಾಗಿ ಆಪ್ತ ಗೆಳೆಯರ ಮಧ್ಯೆ ಮುನಿಸು ಉಂಟಾಗಿದೆಯಾ? ಎಂಬ ಚರ್ಚೆಗಳು ಶುರುವಾಗಿವೆ.

ಸಚಿವ ಬಿ ಶ್ರೀರಾಮುಲು
ಸಚಿವ ಬಿ ಶ್ರೀರಾಮುಲು
author img

By

Published : Dec 4, 2022, 4:07 PM IST

ಬಳ್ಳಾರಿ: ಎರಡು ದೇಹ ಒಂದೇ ಜೀವದಂತಿದ್ದ ಆಪ್ತ ಸ್ನೇಹಿತರಾದ ಸಚಿವ ಶ್ರೀರಾಮುಲು, ಮಾಜಿ ಸಚಿವ ಜನಾರ್ದನರೆಡ್ಡಿ ನಡುವೆ ಬಿರುಕು ಕಾಣಿಸಿಕೊಂಡಂತಿದೆ. ಏಕೆಂದರೆ ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರಾಗಿದ್ದಾರೆ. ಇದು ರಾಜಕೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿದೆ.

ಸಾಮಾನ್ಯವಾಗಿ ಜನಾರ್ದನ ರೆಡ್ಡಿ ಅವರ ಯಾವುದೇ ಕಾರ್ಯಕ್ರಮವಿದ್ದರೂ ಶ್ರೀರಾಮುಲು ಸ್ವಂತ ಸಹೋದರನಂತೆ ಹಾಜರಾಗುತ್ತಿದ್ದರು. ಯಾರಿಗೆ ಆಹ್ವಾನವಿಲ್ಲದಿದ್ದರೂ ಶ್ರೀರಾಮುಲುಗೆ ಆಹ್ವಾನ, ಪ್ರಾಮುಖ್ಯತೆ ಇದ್ದೇ ಇರುತ್ತಿತ್ತು. ಆದ್ರೆ ಇತ್ತೀಚೆಗೆ ನಡೆದ ಜನಾರ್ದನರೆಡ್ಡಿ ಮೊಮ್ಮಗಳ ನಾಮಕರಣ ಕಾರ್ಯಕ್ರಮಕ್ಕೆ ಸಚಿವ ಶ್ರೀರಾಮುಲು ಗೈರಾಗಿದ್ದಾರೆ. ಕಾರ್ಯಕ್ರಮಕ್ಕೆ ಬಿ. ಎಸ್​ ಯಡಿಯೂರಪ್ಪ ಹೋದರೂ ಶ್ರೀರಾಮುಲು ಹೋಗಿಲ್ಲ. ಹೀಗಾಗಿ ಆಪ್ತ ಗೆಳೆಯರ ಮಧ್ಯೆ ಮುನಿಸು ಉಂಟಾಗಿದೆಯಾ? ಎಂಬ ಚರ್ಚೆಗಳು ಶುರುವಾಗಿವೆ. ಜನಾರ್ದನ ರೆಡ್ಡಿಯಿಂದ ಆಪ್ತ ಸ್ನೇಹಿತ ಸಚಿವ ಶ್ರೀರಾಮುಲು ಅಂತರ ಕಾಯ್ದುಕೊಂಡಿದ್ದೇಕೆ? ಎಂಬ ಬಗ್ಗೆ ಗುಸು ಗುಸು ನಡೆಯುತ್ತಿದೆ.

ಬಿಜೆಪಿಯಲ್ಲಿ ಮನ್ನಣೆ ಸಿಗದ ಹಿನ್ನೆಲೆ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಹೀಗಾಗಿ ಸಚಿವ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದೆ. ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಹೋದರರು ಮಾತ್ರ ಹಾಜರಾಗಿದ್ದಾರೆ. ಸಚಿವ ಶ್ರೀರಾಮುಲು ಗೈರು ನಂತರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ.

ಬಿಜೆಪಿ ವಿರುದ್ಧ ಅಸಮಾಧಾನ: ಕಾಂಗ್ರೆಸ್​ಗಿಂತ ಬಿಜೆಪಿ ನಾಯಕರೇ ನನಗೆ ತೊಂದರೆ ಕೊಡುತ್ತಿದ್ದಾರೆ. ನಾನು ಬೆಳೆಸಿದ ಪಕ್ಷದವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಹೇಳುವ ಮೂಲಕ ಈ ಹಿಂದೆ ಸಮಾರಂಭವೊಂದರಲ್ಲಿ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ವೇಳೆ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟುವ ಬಗ್ಗೆ ಸುಳಿವು ನೀಡಿದ್ದರು.

ಸಚಿವ ಬಿ ಶ್ರೀರಾಮುಲು ಅವರು ಮಾತನಾಡಿದರು

ಅದರಂತೆ ಅಸಮಾಧಾನಿತ ಹಾಗೂ ಟಿಕೆಟ್ ಗೊಂದಲದಲ್ಲಿರುವವರ ಜೊತೆ ಜನಾರ್ದನ ರೆಡ್ಡಿ ಸಂಪರ್ಕದಲ್ಲಿದ್ದಾರೆ. ಈ ಸಂಬಂಧವೇ ಈ ಹಿಂದೆ ಶ್ರೀರಾಮುಲು ಜೊತೆಗೂ ಚರ್ಚೆ ನಡೆದಿದೆ. ಆದ್ರೆ ರಾಮುಲು ಇದಕ್ಕೆ ಮಣೆ ಹಾಕುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಇವರಿಬ್ಬರ ನಡುವೆ ಮುನಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಿಜೆಪಿ ಮೇಲೆ ಜನಾರ್ದನ ರೆಡ್ಡಿಗೆ ಬೇಸರ: ಇನ್ನು ಕಾರ್ಯಕ್ರಮಕ್ಕೆ ಭೇಟಿ ನೀಡದ ಸಂಬಂಧ ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾಮೀಜಿಯೊಬ್ಬರ ತಂಗಿ ಮದುವೆಗೆ ಜೈಪುರಕ್ಕೆ ನಾನು ಹೋಗಿದ್ದೆ. ಹಾಗಾಗಿ ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಹೋಗಿಲ್ಲ. ಈ ವಿಚಾರದಲ್ಲಿ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕೀಯ ಹೊರತುಪಡಿಸಿ ನಾನು, ಜನಾರ್ದನ ರೆಡ್ಡಿ ಸ್ನೇಹಿತರು. ಹೊಸ ಪಕ್ಷ ಕಟ್ಟುವ ವಿಚಾರ ಜನಾರ್ದನ ರೆಡ್ಡಿ ವಿವೇಚನೆಗೆ ಬಿಟ್ಟಿದ್ದು. ಪಕ್ಷ ಕಟ್ಟುವ ವಿಚಾರವನ್ನು ಜನಾರ್ದನ ರೆಡ್ಡಿ ನನ್ನ ಜೊತೆ ಚರ್ಚಿಸಿಲ್ಲ. ರಾಜಕೀಯವಾಗಿ ಎಲ್ಲೇ ಇದ್ದರೂ ಜನಾರ್ದನ ರೆಡ್ಡಿಗೆ ಒಳ್ಳೆಯದಾಗಲಿ. ಕೆಲವು ವಿಚಾರದಲ್ಲಿ ಬಿಜೆಪಿ ಮೇಲೆ ಜನಾರ್ದನ್​ ರೆಡ್ಡಿ ಅವರಿಗೆ ಬೇಸರ ಆಗಿದೆ. ಅವರು ಹೊಸ ಪಕ್ಷದ ಕಟ್ಟುವ ಬಗ್ಗೆ ನನಗೆ ಮಾಹಿತಿ ಇಲ್ಲ. ರೆಡ್ಡಿ ಅಸಮಾಧಾನದ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಅಂತಾ ಹೇಳುತ್ತಿದ್ದಾರೆ.

ರೆಡ್ಡಿ ಶ್ರೀರಾಮುಲು ಎಂಬ ಇಬ್ಬರು ಕುಚುಕು ಗೆಳೆಯರ ನಡುವೆ ಈಗ ಮನಸ್ತಾಪ ಉಂಟಾಗಿದೆ ಅನ್ನೋದು ಗಣಿನಾಡಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸ್ನೇಹಿತರ ನಡುವಿನ ಈ ಬಿರುಕು ಮುಂದೆ ರಾಜಕೀಯವಾಗಿ ಯಾವ ಪರಿಣಾಮ ಹಾಗೂ ತಿರುವು ಪಡೆದುಕೊಳ್ಳುತ್ತೆ ಅನ್ನೋದನ್ನ ಕಾದು ನೋಡಬೇಕಾಗಿದೆ.

ಓದಿ: ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಖುರ್ಚಿ ಚಿಂತೆ : ಸಿಎಂ ಸ್ಥಾನ ಮುಂದಿನ ಬಾರಿಯೂ ನಮಗೇ.. ಸಚಿವ ಬಿ ಶ್ರೀರಾಮುಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.