ETV Bharat / state

ಮೀಸಲಾತಿ ವಿಚಾರ: ಎಸ್​ಸಿ ಎಸ್​ಟಿ ಸಮುದಾಯಕ್ಕೆ ಶೀಘ್ರದಲ್ಲೇ ಸಿಹಿ ಸುದ್ದಿ - ಸಚಿವ ಶ್ರೀರಾಮುಲು - ಎಸ್​ಸಿ ಎಸ್​ಟಿ ಸಮುದಾಯಕ್ಕೆ ಶೀಘ್ರದಲ್ಲೇ ಸಿಹಿ ಸುದ್ದಿ

ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಈಗಾಗಲೇ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಅದರಂತೆ ಮೀಸಲಾತಿ ಹೆಚ್ಚಸುವ ಬಗ್ಗೆ ಕೊಟ್ಟಿರುವ ಮಾತಿಗೆ ನಾನು ಬದ್ದನಾಗಿದ್ದೇನೆ ಎಂದು ರಾಮುಲು ತಿಳಿಸಿದ್ದಾರೆ.

bly_01_ramulu bite01new
ಶ್ರೀರಾಮುಲು
author img

By

Published : Sep 1, 2022, 7:22 PM IST

ಬಳ್ಳಾರಿ: ರಾಜ್ಯದ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸದ್ಯದಲ್ಲೇ ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಸಿಹಿ ಸುದ್ದಿ ನೀಡುತ್ತೇವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಜಿಲ್ಲೆಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ಬಳಿ ಏತ ನೀರಾವರಿ ಯೋಜನೆಯ ಕಾಮಗಾರಿ ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಎಸ್ಸಿ ಸಮುದಾಯಕ್ಕೆ ಶೇ.15 ಇರುವ ಮೀಸಲಾತಿ ಪ್ರಮಾಣವನ್ನು ಶೇ.17ಕ್ಕೆ ಹಾಗು ಎಸ್ಟಿಗಳಿಗೆ ಶೇ.3ರ ಇರುವ ಮೀಸಲಾತಿಯ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಮೀಸಲಾತಿ ವಿಚಾರದಲ್ಲಿ ನನ್ನ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳದ ಬಗ್ಗೆ

ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದ ಟ್ವಿಟ್​ಗೆ ಪ್ರತಿಕ್ರಿಯಿಸಿ, ನಾನು ಮೂವತ್ತು ವರ್ಷದಿಂದ ರಾಜಕೀಯದಲ್ಲಿದ್ದೇನೆ. ನನಗೆ ಯಾರು ಬುದ್ಧಿ ಕಲಿಸೋದು ಬೇಕಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಬಿಜೆಪಿಯದ್ದು ಧರ್ಮ ರಾಜಕಾರಣ.. ನಮ್ಮದು ಅಭಿವೃದ್ಧಿ ಸಿದ್ಧಾಂತ: ದಿಗ್ವಿಜಯ್ ಸಿಂಗ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.