ETV Bharat / state

ರಾಜ್ಯದಲ್ಲಿ ಕೋಮು ಗಲಭೆಗೆ ಕಾಂಗ್ರೆಸ್‌ ನೇರ ಕಾರಣ: ಸಚಿವ ಶ್ರೀರಾಮುಲು

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ನಂತರ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ನವರು ​ಗಲಭೆ ಸೃಷ್ಟಿ ಮಾಡಿಸುತ್ತಿದ್ದಾರೆ. ಹಿಂದೂ, ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುತ್ತಿದ್ದಾರೆ. ಕಾಂಗ್ರೆಸ್​ನವರ ಮಾತಿಗೆ ಯಾರೂ ಮರುಳಾಗಬಾರದು, ರಾಜ್ಯದ ಜನ‌ ಜಾಗೃತರಾಗಿರಬೇಕು ಎಂದು ಶ್ರೀರಾಮುಲು ಹೇಳಿದರು.

ಸಾರಿಗೆ ಸಚಿವ ಶ್ರೀರಾಮುಲು
ಸಾರಿಗೆ ಸಚಿವ ಶ್ರೀರಾಮುಲು
author img

By

Published : Apr 23, 2022, 3:46 PM IST

ಬಳ್ಳಾರಿ: ರಾಜ್ಯದಲ್ಲಿನ ಕೋಮು ಗಲಭೆಗಳಿಗೆ ಕಾಂಗ್ರೆಸ್​ನವರೇ ನೇರ ಕಾರಣ. ಚುನಾವಣೆ ವರ್ಷವಾಗಿರುವ ಕಾರಣ ಕಾಂಗ್ರೆಸ್​ನವರು ಗಲಭೆ ಸೃಷ್ಠಿ ಮಾಡುತ್ತಿದ್ದಾರೆ. ಇಡೀ ರಾಜ್ಯಾದ್ಯಂತ ಇದೇ ರೀತಿ ಗಲಭೆ ಸೃಷ್ಠಿಸುತ್ತಾರೆ ಎನ್ನುವ ಅನುಮಾನ ನನಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಆರೋಪಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ನಂತರ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ನವರು ​ ಗಲಭೆ ಸೃಷ್ಟಿ ಮಾಡಿಸುತ್ತಿದ್ದಾರೆ. ಅದಕ್ಕಾಗಿ ಎಲ್ಲ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್​ನವರು ಹಿಂದೂ, ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುತ್ತಿದ್ದಾರೆ. ಅವರ ಮಾತಿಗೆ ಯಾರೂ ಮರುಳಾಗಬಾರದು ಎಂದರು.

ನಮ್ಮ ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥವಾಗಿದ್ದಾರೆ. ಎಲ್ಲ ಗಲಭೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣ ಬಂಧನವಾಗುವಂತೆ ಮಾಡುತ್ತಿದ್ದಾರೆ. ಪಿಎಸ್ಐ ಅಕ್ರಮ ಅಕ್ರಮ ಕಂಡುಹಿಡಿದಿದ್ದು ನಾವು, ಕಾಂಗ್ರೆಸ್​​ನವರಲ್ಲ. ಅವರು ಅಧಿಕಾರದಲ್ಲಿದ್ದಾಗ ಈ ರೀತಿ ತನಿಖೆ ಮಾಡಿಲ್ಲ ಎಂದು ಶ್ರೀರಾಮುಲು ಹೇಳಿದರು.

ಸಕ್ರಿಯರಾಗ್ತಾರಾ ರೆಡ್ಡಿ?: ಮಾಜಿ ಸಚಿವ ಜನಾರ್ಧನ ರೆಡ್ಡಿ ಸಕ್ರಿಯ ರಾಜಕಾರಣಕ್ಕೆ ಬರುವ ವಿಚಾದ ವರಿಷ್ಠರಿಗೆ ಬಿಟ್ಟಿದ್ದು. ಮೊನ್ನೆ ನೆಡದ ಕಾರ್ಯಕಾರಿಣಿಯಲ್ಲಿ ರೆಡ್ಡಿ ಬಗ್ಗೆ ಚರ್ಚೆಯಾಗಿಲ್ಲ. ಕಾದು ನೋಡೋಣ ಏನ್ ಆಗುತ್ತೆ ಎಂದು ಅವರು ಹೇಳಿದರು. ಇದೇ ವೇಳೆ ಶಾಸಕ ರಾಜುಗೌಡ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರು ಸಹೋದರರಿದ್ದಂತೆ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ : ಕೆ.ಎಸ್.ಈಶ್ವರಪ್ಪ ವಿಶ್ವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.