ETV Bharat / state

ಅಲ್ಪಸಂಖ್ಯಾತರು ಬಿಜೆಪಿ ವಿರೋಧಿಗಳಲ್ಲ: ಇಬ್ರಾಹಿಂ ಬಾಬು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಬಲವರ್ಧನೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಸಿ‌.ಇಬ್ರಾಹಿಂ ಬಾಬು ಹೇಳಿದ್ದಾರೆ.

author img

By

Published : Mar 8, 2021, 5:36 PM IST

Minorities are not anti-BJP: Ibrahim Babu
ಇಬ್ರಾಹಿಂ ಬಾಬು ಹೇಳಿಕೆ

ಬಳ್ಳಾರಿ: ಅಲ್ಪಸಂಖ್ಯಾತರು ಬಿಜೆಪಿ ವಿರೋಧಿಗಳಲ್ಲ, ಬಿಜೆಪಿ ಪರವಾಗಿದ್ದಾರೆ. ಕಾಂಗ್ರೆಸ್‌ನವರು ಅಲ್ಪಸಂಖ್ಯಾತರು ಬಿಜೆಪಿ ವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಸಿ‌.ಇಬ್ರಾಹಿಂ ಬಾಬು ಹೇಳಿದರು.

ಇಬ್ರಾಹಿಂ ಬಾಬು ಹೇಳಿಕೆ

ಪತ್ರಿಕಾ ಭವನದಲ್ಲಿಂದು ಮಾತನಾಡಿದ ಅವರು, ಬಿಜೆಪಿಯಲ್ಲಿ ಅಲ್ಪಸಂಖ್ಯಾತರ ಮೋರ್ಚಾ ಇದೆ. ಅದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಬಿಜೆಪಿ ಮೈನಾರಿಟೀಸ್ ವಿರೋಧಿಯೆಂದು ಬಿಂಬಿಸುತ್ತಿದೆ.‌ ಈ ಕಾರಣಕ್ಕಾಗಿಯೇ ಜಿಲ್ಲೆಯಲ್ಲಿ ಮಾರ್ಚ್ 10 ರಂದು ಅಲ್ಪಸಂಖ್ಯಾತರ ಕಾರ್ಯಕಾರಿ‌ ಸಮಿತಿ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರು, ಸ್ಥಳೀಯ ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂದಿನ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.