ಹೊಸಪೇಟೆ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ಐದಾರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಶಾಸಕ ಭೀಮಾನಾಯ್ಕ್ ಮನವಿ ಮಾಡಿದ್ದಾರೆ.
ಈ ಹಿಂದೆ ರಾಯಚೂರು ಜಿಲ್ಲೆಯ ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಭೀಮಾನಾಯ್ಕ್ ಹೋಗಿದ್ದರು.