ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ನಾಗರಿಕರ ಹಿತದೃಷ್ಟಿಯಿಂದ ಜಿಂದಾಲ್ ಕಾರ್ಖನೆಯು ಬಳ್ಳಾರಿಯಲ್ಲಿ 2 ಸಾವಿರ ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಮನವಿ ಮಾಡಿದ್ದಾರೆ.
ಜಿಂದಾಲ್‍ನಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿನೋದ ನೋವೆಲ್ ಅವರನ್ನು ಗುರುವಾರ ಬೆಳಗ್ಗೆ ಭೇಟಿಯಾಗಿ ಜಿಲ್ಲೆಯ ಕೊರೊನಾ ಸ್ಥಿತಿಗತಿ, ತಾವು ಈ ಸಂದರ್ಭದಲ್ಲಿ ನೆರವಿಗೆ ಧಾವಿಸಬೇಕಾದ ಅಗತ್ಯತೆ ಕುರಿತು ಶಾಸಕ ಸೋಮಶೇಖರ ರೆಡ್ಡಿ ಎಳೆಎಳೆಯಾಗಿ ವಿವರಿಸಿದರು.
ಈ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್‍ಗಳ ವ್ಯವಸ್ಥೆ ಮಾಡುವುದೇ ಅತ್ಯಂತ ದೊಡ್ಡ ಸವಾಲಾಗಿದೆ ಎಂಬುದನ್ನು ಸಹ ಶಾಸಕ ಸೋಮಶೇಖರ ರೆಡ್ಡಿ ವಿವರಿಸಿದರು.
ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಿಂದಾಲ್, ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕ್ರೀಡಾ ಕಾಂಪ್ಲೆಕ್ಸ್ನಲ್ಲಿ ಬೆಡ್‍ಗಳ ವ್ಯವಸ್ಥೆ ಮಾಡಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವುದಕ್ಕೆ ಅಗತ್ಯ ಸಹಕಾರ ಮಾಡುವುದಾಗಿ ತಿಳಿಸಿದೆ.