ETV Bharat / state

ವಿಮ್ಸ್ ಆಸ್ಪತ್ರೆಗೆ ಶಾಸಕ ರೆಡ್ಡಿ ಭೇಟಿ: ಅಸ್ವಸ್ಥರಾಗಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಣೆ

ಬೆಳಗಿನ ಉಪಹಾರಕ್ಕೆ ಅವಲಕ್ಕಿ ಸೇವಿಸಿದ್ದ ಸುಮಾರು 37 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಸಂಜೆಯೊತ್ತಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಾಸಕ ಜಿ.ಸೋಮಶೇಖರ ರೆಡ್ಡಿ
author img

By

Published : Mar 17, 2019, 9:13 AM IST

ಬಳ್ಳಾರಿ: ನಗರದ ಗಂಗೋತ್ರಿ ವಸತಿ‌ ನಿಲಯದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರ ಪರಿಣಾಮ ತೀವ್ರ ಅಸ್ವಸ್ಥರಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗಳ ಆರೋಗ್ಯವನ್ನು ಶಾಸಕ ಜಿ. ಸೋಮಶೇಖರ ರೆಡ್ಡಿ ವಿಚಾರಿಸಿದರು.

ಬೆಳಗಿನ ಉಪಹಾರ ಅವಲಕ್ಕಿ ಸೇವಿಸಿದ್ದರಿಂದ ಸರಿಸುಮಾರು 37 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಅವರನ್ನು ಸಂಜೆಯೊತ್ತಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಶಾಸಕ ರೆಡ್ಡಿಯವರು, ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ್ದಲ್ಲದೇ, ವಿದ್ಯಾರ್ಥಿಗಳ ಆರೈಕೆ ಕುರಿತು ಪರಿಶೀಲಿಸಿದರು.

ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗಳ ಆರೋಗ್ಯವನ್ನು ಶಾಸಕ ಜಿ.ಸೋಮಶೇಖರ ರೆಡ್ಡಿ ವಿಚಾರಿಸಿದರು.

ಬಳಿಕ ಮಾತನಾಡಿದ ಅವರು, ಶೀಘ್ರವೇ ರಕ್ತದ ಮಾದರಿಯನ್ನು ಪರೀಕ್ಷಿಸಬೇಕು. ಆಸ್ಪತ್ರೆಯಲ್ಲಿ ರಕ್ತದ ಮಾದರಿ ತಪಾಸಣೆ ಲಭ್ಯವಿಲ್ಲದಿದ್ದರೆ ಖಾಸಗಿ ಲ್ಯಾಬೋರೇಟರಿಗೆ ಕೊಂಡೊಯ್ದು ಪರೀಕ್ಷೆ ನಡೆಸಬೇಕೆಂದು ವೈದ್ಯರಿಗೆ ಸಲಹೆ ನೀಡಿದ್ದಾರೆ. ವಿಪರೀತ ಜ್ವರದಿಂದ ಬಳಲುತ್ತಿರುವವರಿಗೆ ಅಗತ್ಯ ಚಿಕಿತ್ಸೆ ಕೊಡಿಸಬೇಕೆಂದು ಸೂಚನೆ ನೀಡಿದ್ದಾರೆ.

Intro:Body:

R_KN_BEL_03_160319_MLA_SOMASHEKAR_REDY_VISIT_IN_VIMS_HOSPITAL

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.