ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಹಾಮಾರಿ ಕೊರೊನಾ ಸೋಂಕಿರೋದು ನಿನ್ನೆಯ ದಿನ ನನಗೆ ಗೊತ್ತಾಯಿತು. ಅವರು ಬೇಗ ಗುಣಮುಖರಾಗಿ ಬರಲಿ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಪ್ರಾರ್ಥಿಸಿದ್ದಾರೆ.
ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಕೆರೆಯ ಎಚ್ಎಲ್ಸಿ ಕಾಲುವೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ಹಂಚಿಕೊಂಡ್ರು.
ಬಿಎಸ್ವೈ ಅವರಿಗೆ ಮಹಾಮಾರಿ ಕೊರೊನಾ ಸೋಂಕಿರೋದು ನಮಗೆ ಬಹಳ ನೋವಾಗಿದೆ. ಅವರು ಆದಷ್ಟು ಬೇಗನೆ ಗುಣಮುಖರಾಗಿ ಬರಬೇಕು. ಈ ನಾಡಿಗೆ ಅವರ ಸೇವೆ ಅತ್ಯಗತ್ಯವಾಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆರೋಗ್ಯ ಮಾತೆಯಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಸೋಮಶೇಖರರೆಡ್ಡಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖುಷಿ ತಂದಿದೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರೋದು ನಮಗೆಲ್ಲ ಖುಷಿ ತಂದಿದೆ. ಅಂಜನಾದ್ರಿ ಬೆಟ್ಟದಲ್ಲಿ ವಾಯು, ಸುಗ್ರೀವ, ರಾಮನೂ ಕೂಡ ನೆಲೆಸಿದ್ದ ಎಂಬ ಪ್ರತೀತಿಯಿದೆ. ಹೀಗಾಗಿ, ಅಲ್ಲಿಂದ ರಾಮಮಂದಿರ ನಿರ್ಮಾಣಕಾರ್ಯಕ್ಕೆ ಒಂದು ಕಲ್ಲನ್ನು ಒಯ್ಯಲಾಗಿದೆ. ಹೀಗಾಗಿ, ರಾಮಮಂದಿರದಲ್ಲೂ ಕೂಡ ಅಂಜನಾದ್ರಿ ಬೆಟ್ಟದ ಕಲ್ಲನ್ನು ನಾವ್ ನೋಡಬಹುದಾಗಿದೆ ಎಂದರು.