ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಭೀಮನಾಯ್ಕ ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಭೀಮಾನಾಯ್ಕ ಅವರ ಪುತ್ರ ಅಶೋಕ್ (21), ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರ ಎಂಎಸ್‌ಪಿಎಲ್ ಕ್ರಾಸ್‌ನ, ಫ್ಲೈಓವರ್‌ನಲ್ಲಿ ಹೊಸಪೇಟೆಯಿಂದ ಹಗರಿಬೊಮ್ಮನಹಳ್ಳಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಶೋಕ್ ಪ್ರಯಾಣಿಸುತ್ತಿದ್ದ ಔಡಿ ಕಾರು ಎದುರಿನಿಂದ ಬಂದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ಅಶೋಕ್ಗೆ ಗಾಯಗಳಾಗಿದ್ದು, ಟಾಟಾ ಏಸ್‌ನಲ್ಲಿದ್ದವರ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಶಾಸಕ ಭೀಮಾನಾಯ್ಕ ಹಾಗೂ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.