ETV Bharat / state

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮುಖಂಡರ ಮನವಿ - mlc election

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರನ್ನು ಗೆಲ್ಲಿಸಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಕೆ.ಸಿ. ಕೊಂಡಯ್ಯ ಮತ್ತು ಅಲ್ಲಂ ವೀರಭದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

Congress Leaders appeal to people as do vote for  sharanappa mattura
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮುಖಂಡರ ಮನವಿ
author img

By

Published : Oct 22, 2020, 12:29 PM IST

ಬಳ್ಳಾರಿ: ಅಕ್ಟೋಬರ್ 28ರಂದು ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರನ್ನು ಗೆಲ್ಲಿಸಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ ಮತ್ತು ಅಲ್ಲಂ ವೀರಭದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

ಬಳ್ಳಾರಿಯ ಬಾಲಾ ರಿಜೆನ್ಸಿ ಹೋಟೆಲ್​​ನಲ್ಲಿಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ.ಕೊಂಡಯ್ಯ, ಕಳೆದ ಆರು ವರ್ಷದ ಅವಧಿಯಲ್ಲಿ ಶರಣಪ್ಪ ಮಟ್ಟೂರ ಅವರು ಶಿಕ್ಷಕರ ನಲಿವು-ನೋವಿಗೆ ಸದಾ ಸ್ಪಂದಿಸಿದ್ದಾರೆ. ಅತಿಥಿ ಶಿಕ್ಷಕರ ವೇತನ ತಾರತಮ್ಯ ನೀತಿ ಹಾಗೂ ವೇತನ ಪಾವತಿ ವಿಳಂಬ ಸೇರಿದಂತೆ ಇತರೆ ಸಮಸ್ಯೆಗಳಿಗೆ ಶರಣಪ್ಪ ಮಟ್ಟೂರ ಸ್ಪಂದಿಸಿದ್ದು, ಶೇ. 60ರಷ್ಟು ಸಮಸ್ಯೆಗಳಿಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮುಖಂಡರ ಮನವಿ

ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಶಿಕ್ಷಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಹಾಗಾಗಿ ಅವರಿಗೆ ಶಿಕ್ಷಕರು ತಮ್ಮ ಅಮೂಲ್ಯವಾದ ಮತವನ್ನು ಹಾಕಿ ಗೆಲ್ಲಿಸಬೇಕೆಂದು ಕೋರಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ.ಎಸ್.ಮಹಮ್ಮದ ರಫೀಕ್, ಬ್ಯಾಕ್ ಕಾಂಗ್ರೆಸ್​​ನ ಯುವ ಮುಖಂಡ ಅಸುಂಡಿ ನಾಗರಾಜಗೌಡ, ಜಿಲ್ಲಾ ಪಂಚಾಯತ್​ ಸದಸ್ಯರಾದ ಎ.ಮಾನಯ್ಯ, ಮುಂಡರಗಿ ನಾಗರಾಜ, ಮುಖಂಡರಾದ ಘನಮಲ್ಲನಗೌಡ, ಗೋನಾಳು ವಿರುಪಾಕ್ಷಗೌಡ, ಅಸುಂಡಿ ಹೊನ್ನೂರಪ್ಪ, ಮಾಜಿ ಎಂಎಲ್​​ಸಿ ಕೆ.ನಿರಂಜನ ನಾಯ್ಡು ಸೇರಿದಂತೆ ಇನ್ನಿತರೆ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.