ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯಲ್ಲಿ ಕೋವಿಡ್-19 ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಎಫ್.ಮಹಮ್ಮದ್ ಇಮಾಮ್ ನಿಯಾಜಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ವಿಜಯನಗರ ಕ್ಷೇತ್ರದಲ್ಲಿ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮ ನಡೆಯಲಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಹೇಳಿದರು.
ಈ ವೇಳೆ ಮುಖಂಡರಾದ ವೆಂಕಟರಾವ್ ಘೋರ್ಪಡೆ, ನಿಂಬಗಲ್ ರಾಮಕೃಷ್ಣ, ಸಣ್ಣೇಕೆಪ್ಪ ಶೆಟ್ಟರ್, ಸುವರ್ಣಮ್ಮ ಸಣ್ಣೇಕೆಪ್ಪ, ಗೊಗ್ಗ ಮಂಗಳಗೌರಿ ಇನ್ನಿತರರಿದ್ದರು.