ಬಳ್ಳಾರಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ 10ಕ್ಕಿಂತ ಹೆಚ್ಚಿನ ಕುರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗೇಟ್ ಬಳಿ ನಡೆದಿದೆ.
ಕುರಿಗಳು ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಹೈವೇ ಪ್ಯಾಟ್ರೋಲಿಂಗ್, ಟೋಲ್ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಸ್ಥಳಕ್ಕೆ ಕಾನಾಹೊಸಳ್ಳಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.