ETV Bharat / state

ಮೈಲಾರ ಕಾರ್ಣಿಕೋತ್ಸವ : ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧ! - Mylara

ಕುರವತ್ತಿಯ ಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ರಥೋತ್ಸವ ವಿಷಯದಲ್ಲಿ ಇದೇ ನಿಯಮಗಳನ್ನು ಅನುಸರಿಸಲು ಡಿಸಿ ಮಾಲಪಾಟಿ ಸೂಚಿಸಿದ್ದಾರೆ..

Mylara karnikostva
ಮೈಲಾರ ಕಾರ್ಣಿಕೋತ್ಸವ
author img

By

Published : Feb 15, 2021, 9:55 PM IST

ಬಳ್ಳಾರಿ : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಬಗ್ಗೆ ಸಭೆ ನಡೆಸಿ ಮಾತನಾಡಿರುವ ಡಿಸಿ ಮಾಲಪಾಟಿ, ಕಾರ್ಣಿಕೋತ್ಸವದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕಾರ್ಣಿಕೋತ್ಸವಕ್ಕೆ ಫೆ.19ರಿಂದ ಮಾ.2ರವರೆಗೆ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಹಾಗೂ ಬ್ಯಾರಿಕೇಡ್ ಸೇರಿ ಇತರ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಜನರು ಎತ್ತಿನ ಗಾಡಿ, ಟ್ರ್ಯಾಕ್ಟರ್, ವಾಹನಗಳ ಮೂಲಕ ಮೈಲಾರ ಪ್ರವೇಶಿಸದಂತೆ ಕ್ರಮಕೈಗೊಳ್ಳಬೇಕು.

ಈ ಕುರಿತು ಹಡಗಲಿ, ಹರಪನಳ್ಳಿ ಹಾಗೂ ಹಾವೇರಿ, ದಾವಣಗೆರೆ, ಗದಗ ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಮಾಲಪಾಟಿ‌ ಸೂಚಿಸಿದ್ದಾರೆ. ಮೈಲಾರ/ಕುರುವತ್ತಿ ಗ್ರಾಮದ ಸರಹದ್ದಿನ ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳು ನಡೆಸಲು ಅವಕಾಶ ಇಲ್ಲ.

ಕುರವತ್ತಿಯ ಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ರಥೋತ್ಸವ ವಿಷಯದಲ್ಲಿ ಇದೇ ನಿಯಮಗಳನ್ನು ಅನುಸರಿಸಲು ಡಿಸಿ ಮಾಲಪಾಟಿ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.