ಬಳ್ಳಾರಿ : ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.
ಹಗರನೂರು ಗ್ರಾಮದ ಈಡಿಗರ ನಿಂಗಪ್ಪ (38) ಮೃತಪಟ್ಟ ಕೂಲಿ ಕಾರ್ಮಿಕ. ಮೃತ ನಿಂಗಪ್ಪ ಹೂವಿನಹಡಗಲಿ ತಾಲೂಕಿನ ದೇವಗೊಂಡನಹಳ್ಳಿ ಗ್ರಾಮ ಪಂಚಾಯತ್ಗೆ ಸೇರಿದ ಉಪನಾಯಕನಹಳ್ಳಿ ಗ್ರಾಮದ ಜಿನುಗು ಕೆರೆಯಲ್ಲಿ ಹೂಳೆತ್ತುವ ಕೆಲಸ ಮಾಡುತ್ತಿದ್ದು, ಈ ವೇಳೆ ಮೈಮೇಲೆ ಮಣ್ಣು ಕುಸಿದು ಬಿದ್ದು ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಹೂವಿನಹಡಗಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಓದಿ : ಸಿಮೆಂಟ್ ತುಂಬಿದ ಲಾರಿ ಕಾರಿಗೆ ಡಿಕ್ಕಿ.. ಮಗಳು ಸಾವು!
ಘಟನಾ ಸ್ಥಳಕ್ಕೆ ಹಗರನೂರು ಗ್ರಾಮ ಪಂಚಾಯತ್ ಪಿಡಿಒ ವೀರಣ್ಣ ನಾಯ್ಕ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿಂಗಪ್ಪನ ಕುಟುಂಬಕ್ಕೆ ನರೇಗಾ ಯೋಜನೆಯಡಿ 75 ಸಾವಿರ ರೂ.ಗಳ ಪರಿಹಾರ ನೀಡಲಾಗುವುದು ಎಂದು ಪಿಡಿಒ ವೀರಣ್ಣನಾಯ್ಕ ತಿಳಿಸಿದ್ದಾರೆ.