ಬಳ್ಳಾರಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಶಾಖೆ, ಪೊಲೀಸ್ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ರಸ್ತೆ ಅಪಘಾತಗಳ ಬಗ್ಗೆ ಜಾಗೃತಿ ಜಾಥಾ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ನಾಡ್ ಮಾತನಾಡಿದರು. ರಸ್ತೆ ನಿಯಮಗಳನ್ನು ಪಾಲಿಸಿ ಅಪಘಾತಗಳಿಂದ ದೂರವಿರಲು ಸಲಹೆ ನೀಡಿದರು.
ಸಂಚಾರಿ ಪೊಲೀಸ್ ಠಾಣೆಯ ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ನಾಗರಾಜ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್ ಮತ್ತು ಸದಸ್ಯರು ಇದ್ದರು.
ಕಾಲೇಜಿನ ಮೈದಾನದಿಂದ ಜಾಥಾ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಸಂಚರಿಸಲಾಯಿತು.