ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 412 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 21810 ಕ್ಕೇರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 6733 ಮಂದಿ ಗುಣಮುಖರಾಗಿದ್ದಾರೆ. 264 ಮಂದಿ ಸಾವನ್ನಪ್ಪಿದ್ದಾರೆ. 4813 ಸಕ್ರಿಯ ಪ್ರಕರಣಗಳಿವೆ.
ಇಂದು ನಾಲ್ಕು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದು ಅಂದಾಜು 351 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.