ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಆದೇಶವನ್ನ ಜಿಲ್ಲಾಡಳಿತ ಜಾರಿಗೊಳಿಸಿದೆ.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೊಂಬು ಬ್ಯಾರಿಕೇಡ್ಗಳ ಅಳವಡಿಕೆ ಮಾಡಲಾಗುತ್ತಿದೆ. ಅಲ್ಲದೇ ಪ್ರತಿದಿನ ರಾತ್ರಿ ಎಂಟು ಗಂಟೆಯಿಂದಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಹೊರಡಿಸಿದ ಆದೇಶದ ಮೇರೆಗೆ ಬೊಂಬು ಬ್ಯಾರಿಕೇಡ್ ಹಾಕುವ ಮೂಲಕ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ರಾತ್ರಿ 8 ಗಂಟೆ ಯಿಂದ ಬೆಳ್ಳಿಗ್ಗೆ 5 ಗಂಟೆವರೆಗೂ ಈ ನೈಟ್ ಕರ್ಫ್ಯೂ ಇರಲಿದೆ. ನಗರದ ಪ್ರತಿ ರಸ್ತೆಗೂ ಬ್ಯಾರಿಕೇಡ್ ಅಳವಡಿಸಿ ನಗರದಲ್ಲಿ ಸಂಪೂರ್ಣ ಅಂಗಡಿ- ಮುಂಗಟ್ಟುಗಳನ್ನ ಪೊಲೀಸರು ಬಂದ್ ಮಾಡಿಸಿದ್ದಾರೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ ಮೂಡಿದ್ದು, ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಅನುಮಾನ ಮೂಡಿದೆ.