ETV Bharat / state

ಸಚಿವ ಆನಂದ್‌ ಸಿಂಗ್ ಪುತ್ರನಿಗೆ ಟಿಕೆಟ್ ನೀಡಿದ್ದು ಬೇಸರ ತರಿಸಿದೆ: ಬಿಜೆಪಿ ನಾಯಕಿ ರಾಣಿ ಸಂಯುಕ್ತ - ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್

ಬಿಜೆಪಿ ಪಕ್ಷದಲ್ಲಿ ಸಚಿವ ಶಾಸಕರ ಮಕ್ಕಳಿಗೆ ಟಿಕೆಟ್ ನೀಡುತ್ತಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ- ಬಿಜೆಪಿ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ರಾಣಿ ಸಂಯುಕ್ತ

BJP Women National Executive Member Rani Samyukta
ಬಿಜೆಪಿ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ರಾಣಿ ಸಂಯುಕ್ತ ಮಾತನಾಡಿದರು.
author img

By

Published : Apr 12, 2023, 10:48 PM IST

Updated : Apr 12, 2023, 10:56 PM IST

ಬಿಜೆಪಿ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ರಾಣಿ ಸಂಯುಕ್ತ ಮಾತನಾಡಿದರು.

ವಿಜಯನಗರ: ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಘೋಷಣೆ ಆಗುತ್ತಿದಂತೆ ರಾಣಿ ಸಂಯುಕ್ತ ಅವರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇನ್ನೆರಡು ದಿನಗಳಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಏನೆಂಬುದನ್ನು ತಿಳಿಸುವುದಾಗಿ ಹೇಳಿದ್ದಾರೆ.

ನಗರದ ತಮ್ಮ ನಿವಾಸದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ಪಕ್ಷ ಟಿಕೆಟ್ ನೀಡಿರುವುದು ತೀವ್ರ ನೋವು ಉಂಟುಮಾಡಿದೆ ಎಂದರು.

ಪಕ್ಷದಲ್ಲಿ ಸಚಿವ, ಶಾಸಕರ ಮಕ್ಕಳಿಗೆ ಟಿಕೆಟ್ ನೀಡುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಈ ಬೆಳವಣಿಗೆಯಿಂದ ನನಗೆ ಬೇಸರವಾಗಿದೆ. ಬೇರೆ ಪಕ್ಷದವರು ನನ್ನ ಸಂಪರ್ಕದಲ್ಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, ಎರಡು ದಿನದಲ್ಲಿ ತಮ್ಮ ಸ್ಪಷ್ಟ ನಿಲುವು ಸ್ಪಷ್ಟಪಡಿಸುವುದಾಗಿ ತಿಳಿಸಿದರು.

ಅಸಮಾಧಾನದ ಹೊಗೆ:ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಬಿಜೆಪಿ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ರಾಣಿ ಸಂಯುಕ್ತ ಅವರಿಗೆ ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಎಚ್.ಆರ್.ಗವಿಯಪ್ಪ ಅವರು ರಾಣಿ ಸಂಯುಕ್ತ ಅವರ ನಿವಾಸಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ, ಕೆಲ ಕಾಲ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಆರ್.ಗವಿಯಪ್ಪ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಣಿ ಸಂಯುಕ್ತ, ಚುನಾವಣಾ ಪ್ರಚಾರದ ನಿಮಿತ್ತ ಎಚ್.ಆರ್. ಗವಿಯಪ್ಪ ವಾರ್ಡ್ಗೆ ಬಂದಿದ್ದರು. ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿರುವ ವಿಚಾರ ನಮ್ಮ ವೈಯಕ್ತಿಕ ಎಂದಷ್ಟೇ ಎಂದು ತಿಳಿಸಿದರು.

ಇದನ್ನೂಓದಿ:ಫ್ಯಾಮಿಲಿ ಪಾಲಿಟಿಕ್ಸ್: 20ಕ್ಕೂ ಹೆಚ್ಚು ರಕ್ತ ಸಂಬಂಧಿ ಅಭ್ಯರ್ಥಿಗಳಿಗೆ ಬಿಜೆಪಿ ಮಣೆ

Last Updated : Apr 12, 2023, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.