ETV Bharat / state

ಬಳ್ಳಾರಿಯಲ್ಲಿ ಪಾರ್ಟಿ, ಡಿಜೆ - ಡ್ಯಾನ್ಸ್​ಗೆ ಬ್ರೇಕ್: ಉಲ್ಲಂಘಿಸಿದ್ರೆ ಕಠಿಣ ಕ್ರಮ

ರಾಜ್ಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗವು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು, ಪ್ರಸ್ತುತ ಬ್ರಿಟನ್ ದೇಶದಿಂದ ಬರುವ ಪ್ರಯಾಣಿಕರನ್ನು ರಾಜ್ಯದ ಜಿಲ್ಲೆಗಳಲ್ಲಿ ಪ್ರವೇಶಿಸುವುದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

Bellary
ಎಸ್.ಎಸ್.ನಕುಲ್
author img

By

Published : Dec 31, 2020, 8:13 PM IST

ಬಳ್ಳಾರಿ: ಡಿ.31 ರಿಂದ ಜ. 2ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಪಾರ್ಕ್‍ಗಳಲ್ಲಿ, ಮೈದಾನಗಳಲ್ಲಿ ಹಾಗೂ ಜನರು ಸೇರುವಂತಹ ಪ್ರದೇಶಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಹೊಸ ವರ್ಷದ ಸಂಭ್ರಮಾಚರಣೆಯನ್ನು ತಮ್ಮ ಮನೆ, ಹೋಟೆಲ್​, ಬಾರ್, ಪಬ್, ರೆಸ್ಟೋರೆಂಟ್​ಗಳಲ್ಲಿ, ಕನಿಷ್ಠ ಪ್ರಮಾಣದ ಜನರು ಸೇರಿ ಇಂದು ರಾತ್ರಿ 12 ಗಂಟೆಗೆ ಸೀಮಿತಗೊಳಿಸಬೇಕು. ಎಲ್ಲ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಆಚರಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ - ಡಾನ್ಸ್ ಕಾರ್ಯಕ್ರಮ, ವಿಶೇಷ ಪಾರ್ಟಿ, ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಹೋಟೆಲ್​, ಫಾರ್ಮ್ ಹೌಸ್, ಪ್ರವಾಸಿ ತಾಣಗಳು, ಶಾಪಿಂಗ್ ಮಾಲ್‍ಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ತಿಳಿಸಿದ್ದಾರೆ. ಪ್ರಾರ್ಥನಾ ಮಂದಿರ, ದೇವಸ್ಥಾನ, ಚರ್ಚ್, ಮಸೀದಿ ಇತ್ಯಾದಿ ಸ್ಥಳಗಳಲ್ಲಿ ಆಚರಣೆ ಮಾಡಬಯಸುವವರಿಗೂ ಸಹ ಇಂದು ಮಧ್ಯರಾತ್ರಿ 12ರವರೆಗೆ ಕಡಿಮೆ ಪ್ರಮಾಣದ ಜನರು ಸೇರಿಕೊಂಡು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನಿಷೇಧಾಜ್ಞೆಗೆ ಬೀಕೋ ಎನ್ನುತ್ತಿರುವ ಕಡಲತೀರ; ಹೊಸ ವರ್ಷಾಚರಣೆಗೆ ಗೋವಾದತ್ತ ಹರಿದ ಜನ!

ರಾಜ್ಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗವು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು, ಪ್ರಸ್ತುತ ಬ್ರಿಟನ್ ದೇಶದಿಂದ ಬರುವ ಪ್ರಯಾಣಿಕರನ್ನು ರಾಜ್ಯದ ಜಿಲ್ಲೆಗಳಲ್ಲಿ ಪ್ರವೇಶಿಸುವುದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತಾ ಹಿತದೃಷ್ಟಿಯಿಂದ ಕೆಲವು ನಿರ್ಬಂಧನೆಗಳನ್ನು ವಿಧಿಸುವುದು ಅನಿವಾರ್ಯವಾಗುತ್ತದೆ.

ಇನ್ನು ಹೊಸ ವರ್ಷದ ಆಚರಣೆಯಲ್ಲಿ ಅತೀ ಹೆಚ್ಚಿನ ಜನರು ಸೇರುವ ಸಂಭವಿರುವುದರಿಂದ, ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತಾ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.