ETV Bharat / state

ಅಟಲ್ ಬಿಹಾರಿ ವಾಜಪೇಯಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಲು ಸೂಚನೆ

ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಶಾಸಕ ಸೋಮಶೇಖರ ರೆಡ್ಡಿ ಹಾಗೂ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಕೂಡಲೇ ಬಡಾವಣೆಗೆ ಅಗತ್ಯ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Notice to Provide Infrastructure to Atal Bihari Vajpayee aria
ಅಟಲ್ ಬಿಹಾರಿ ವಾಜಪೇಯಿ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಸೂಚನೆ
author img

By

Published : May 28, 2020, 11:14 AM IST

ಬಳ್ಳಾರಿ: ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ನಗರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ, ರಸ್ತೆ, ಕುಡಿಯು ನೀರು ಸರಬರಾಜು ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಬಡಾವಣೆಯ ನಿವಾಸಿಗಳು ಕೋರಿದರು.

ನಿವಾಸಿಗಳ ಅಹವಾಲು ಆಲಿಸಿದ ಶಾಸಕ ಸೋಮಶೇಖರ ರೆಡ್ಡಿ ಹಾಗೂ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಕೂಡಲೇ ಬಡಾವಣೆಗೆ ಅಗತ್ಯ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಡಾವಣೆಯ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದು, ಕೂಡಲೇ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಲೇಔಟ್ಅ‌ನ್ನು ಸಂಗನಕಲ್ಲು ಗ್ರಾಪಂನಿಂದ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.