ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪಾಲುದಾರಿಕೆಯ ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ಇಂದು ಹೈದ್ರಾಬಾದ್‌ನ ಸಿಬಿಐ ನ್ಯಾಯಾಲಯದಲ್ಲಿ ನಡೆಯಲಿದೆ.ಈ ಸಂಬಂಧ ನಗರದ ಗಣಿ ಉದ್ಯಮಿ ಟಪಾಲ್ ಗಣೇಶ್ ಸಹೋದರ ಟಪಾಲ್ ಏಕಾಂಬರಂ ಅವರಿಗೆ ಸಮನ್ಸ್ ಮಾಡಿರುವ ಜಾರಿ ಮಾಡಿರುವ ನ್ಯಾಯಾಲಯ, ಕಂಪನಿ ನಡೆಸಿದ ಅಕ್ರಮ ಗಣಿಗಾರಿಕೆಯ ಕುರಿತಾದ ಸಾಕ್ಷ್ಯಗಳನ್ನು ಒದಗಿಸುವಂತೆ ಸೂಚಿಸಿದೆ.
ಜನಾರ್ದನ ರೆಡ್ಡಿ ಮೇಲಿನ ಅಕ್ರಮ ಗಣಿಗಾರಿಕೆಯ ಆರೋಪ ಕುರಿತಾದ ಪ್ರಕರಣ ವಿಳಂಬವಾಗುತ್ತಿದ್ದು, ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ತೀವ್ರಗೊಳಿಸಲಾಗಿದೆ. ಪ್ರಕರಣಗಳ ಸಂಬಂಧ ರೆಡ್ಡಿ ಕಚೇರಿಯಿಂದ ಕಚೇರಿಗೆ, ಜೈಲಿನಿಂದ ಜೈಲಿಗೆ ಅಲೆದು ಒಂದೂವರೆ ವರ್ಷದ ಹಿಂದಷ್ಟೇ ನ್ಯಾಯಾಲಯದಿಂದ ವಿನಾಯಿತಿಯನ್ನು ಪಡೆದು ಬಂದು ತಮ್ಮ ಹುಟ್ಟೂರು ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ತಮ್ಮ ಮೇಲಿರುವ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ನಿರಂತರವಾಗಿ ವಿಚಾರಣೆ ನಡೆಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕೆಂದು ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
ಈ ಅರ್ಜಿ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂದೇ ಹೇಳಬಹುದು. ಇತ್ತೀಚೆಗೆ ನ್ಯಾಯಾಲಯ ಆದೇಶವೊಂದನ್ನು ಹೊರಡಿಸಿದ್ದು, ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಇತರರ ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಯನ್ನು ಆರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಈ ಸಂದರ್ಭದಲ್ಲಿ ಪ್ರಕರಣಗಳ ಪ್ರಮುಖ ಆರೋಪಿಯಾಗಿರುವ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಇರಬಾರದು ಎಂದು ಆದೇಶ ನೀಡಿದೆ. ಈ ಆದೇಶದ ಪ್ರಕಾರ ಜನಾರ್ದನ ರೆಡ್ಡಿ ಸೋಮವಾರ ಬಳ್ಳಾರಿ ತೊರೆದಿದ್ದಾರೆ.
ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು