ಹೊಸಪೇಟೆ (ವಿಜಯನಗರ): ಕಲುಷಿತ ನೀರು ಕುಡಿದು ಹೂವಿನಹಡಗಲಿಯ ಮರಕಬ್ಬಿಯಲ್ಲಿ 6 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ವಿಶೇಷ ತಂಡ ಗ್ರಾಮಕ್ಕೆ ಭೇಟಿ ನೀಡಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿತ್ತು. ಇದೀಗ ಗ್ರಾಮಕ್ಕೆ ಭೇಟಿ ನೀಡಿರುವ ತಂಡ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.
ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಿದ ತಂಡ ಬಳಿಕ ಮೃತರ ಕುಟುಂಬಸ್ಥರ ಬಳಿ ತೆರಳಿ ಮಾಹಿತಿ ಕಲೆಹಾಕಿದ್ದಾರೆ. ಜೊತೆಗೆ ಜಲಜೀವನ್ ಮಿಷನ್ ಕಾಮಗಾರಿ ವೀಕ್ಷಿಸಿದ್ದಾರೆ. ಸರ್ಕಾರದ ಸೂಚನೆಯಂತೆ 5 ದಿನಗಳೊಳಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಮೌನೇಶ್ ಮೌದ್ಗಿಲ್, ಈಗಾಗಲೇ ಗ್ರಾಮದಲ್ಲಿ ಹಲವರ ಜೊತೆ ಮಾತನಾಡಿದ್ದೇವೆ. ಈ ಘಟನೆ ಯಾಕಾಗಿದೆ?, ಭವಿಷ್ಯದಲ್ಲಿ ಈ ರೀತಿ ಘಟನೆಯಾಗಬಾರದೆಂಬ ಉದ್ದೇಶ ನಮ್ಮದು. ಈ ಬಗ್ಗೆ ವರದಿ ನೀಡಲಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ಟಿಕೆಟ್ ಕೈ ತಪ್ಪಿದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಿವಕುಮಾರ್ ಉದಾಸಿ