ETV Bharat / state

ವಿಜಯನಗರ: ಕಲುಷಿತ ನೀರು ಸೇವಿಸಿ ವೃದ್ಧೆ ಸಾವು - ಕಲಷಿತ ನೀರು

ವಿಜಯನಗರ ಜಿಲ್ಲೆಯ ಕಾರಗನೂರು ಗ್ರಾಮದಲ್ಲಿ ಕಲಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ಓರ್ವ ವೃದ್ದೆ ಸಾವನ್ನಪ್ಪಿದ್ದಾರೆ.

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು
ಕಲುಷಿತ ನೀರು ಸೇವಿಸಿ ವೃದ್ಧೆ ಸಾವು
author img

By ETV Bharat Karnataka Team

Published : Jan 8, 2024, 12:03 PM IST

Updated : Jan 8, 2024, 12:14 PM IST

ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದ ಕಾರಿಗನೂರು ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ, ಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಾರಿಗನೂರು ಆರ್‌ಬಿಎಸ್‌ಎಸ್‌ಎನ್ ಕ್ಯಾಂಪ್‌ ನಿವಾಸಿ ಸೀತಮ್ಮ (66) ಮೃತರೆಂದು ಗುರುತಿಸಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರನ್ನು ಬಳ್ಳಾರಿ ವಿಮ್ಸ್‌ಗೆ ದಾಖಲಿಸಲಾಗಿತ್ತು.

ಕಲುಷಿತ ನೀರು ಸೇವನೆಯಿಂದ ವಾಂತಿ, ಬೇಧಿ ಹೆಚ್ಚಾಗಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಭಾನುವಾರ 27ಕ್ಕೇರಿದೆ. ಈ ನಡುವೆ ಶಾಸಕ ಎಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಶಿಕಾರಿ ಕ್ಯಾಂಪ್‍ಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡದೇ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ನಗರಸಭೆ ಎಇಇ ಸತೀಶ್ ಹಾಗೂ ಇತರೆ ಅಧಿಕಾರಿಗಳನ್ನು ಸ್ಥಳದಲ್ಲಿಯೇ ತರಾಟೆಗೆ ತೆಗೆದುಕೊಂಡರು.

ಶಾಸಕ ಗವಿಯಪ್ಪ ಎಚ್ಚರಿಕೆ​: ವಾಂತಿ, ಬೇಧಿಯಾಗಿ ಜನರು ಏಕಾಏಕಿ ಆಸ್ಪತ್ರೆಗೆ ಬರಲು ಆರಂಭಿಸಿದ್ದಾರೆ. ಗ್ರಾಮಕ್ಕೆ ಸರಬರಾಜಾಗುವ ನೀರನ್ನು ಪರಿಶೀಲನೆ ಮಾಡಿದಾಗ ಕಲುಷಿತ ನೀರು ಪೂರೈಕೆಯಾಗಿರುವುದು ಬೆಳಕಿಗೆ ಬಂದಿದೆ. ಕಾರಿಗನೂರು ಗ್ರಾಮಕ್ಕೆ ತುಂಗಭದ್ರಾ ಜಲಾಶಯದಿಂದ ಕಳೆದ 20 ವರ್ಷದ ಹಿಂದೆ ನೀರು ಸರಬರಾಜುಗೆ ಪೈಪ್‌ಲೈನ್ ಅಳವಡಿಸಲಾಗಿದೆ. ಪೈಪ್‍ಲೈನ್‍ನಲ್ಲಿ ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ. ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಾಗುತ್ತಿದ್ದಂತೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಕೂಡಲೇ ಶುದ್ಧ ಕುಡಿಯುವ ನೀರು ಪೂರೈಕೆ ಪೈಪ್‍ಲೈನ್ ದುರಸ್ತಿಗೊಳಿಸಬೇಕು. ಸಮಸ್ಯೆಯನ್ನು ಬಗೆಹರಿಸದಿದ್ದರೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಶೋಕಾಸ್ ನೋಟಿಸ್: ಶುದ್ಧ ಕುಡಿಯುವ ನೀರು ಘಟಕದಿಂದ ಉಚಿತ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣ ಕುರಿತಂತೆ ಕಾರಿಗನೂರು, ಶಿಕಾರಿ ಕ್ಯಾಂಪ್‍ಗೆ ಕಲುಷಿತ ನೀರು ಸರಬರಾಜಾಗಿದೆ. ಕಲುಷಿತ ನೀರು ಪೂರೈಕೆಯಿಂದ ಘಟನೆ ನಡೆದಿದ್ದರೆ, ನಿರ್ಲಕ್ಷ್ಯವಹಿಸಿದ ಅಧಿಕಾರಿಗಳಿಗೆ ಶೋಕಾಸ್ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

27 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯಕ್ ಹೇಳಿದ್ದಾರೆ.

ದೀಪದ ಕೆಳಗೆ ಕತ್ತಲು ಎಂಬಂತೆ ತುಂಗಭದ್ರಾ ಜಲಾಶಯ ಕೂಗಳತೆ ದೂರದಲ್ಲಿದ್ದರೂ ವಿಜಯನಗರ ಜಿಲ್ಲೆಯ ಜನರಿಗೆ ಮಾತ್ರ ಕುಡಿಯುವ ನೀರಿನ ಬವಣೆ ತಪ್ಪಿಲ್ಲ. ಇದು ನಿಜಕ್ಕೂ ವಿಪರ್ಯಾಸದ ಸಂಗತಿ. ಈ ಕೂಡಲೇ ಕಾರಿಗನೂರು, ಶಿಕಾರಿ ಕ್ಯಾಂಪ್‍ಗೆ ಶುದ್ಧ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಲೆಮಾರಿ, ಅರೆ ಅಲೆಮಾರಿ ಒಕ್ಕೂಟದ ಅಧ್ಯಕ್ಷ ಸಣ್ಣ ಮಾರೆಪ್ಪ ಆಗ್ರಹಿಸಿದರು.

ಇದನ್ನೂ ಓದಿ: ಪಾವಗಡ ವೆಂಕಟಮ್ಮನಹಳ್ಳಿ ಸ್ಫೋಟ ​ಪ್ರಕರಣ: ನಾಲ್ವರು ಮಾಜಿ ನಕ್ಸಲರು ಪೊಲೀಸ್​ ವಶಕ್ಕೆ

Last Updated : Jan 8, 2024, 12:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.