ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನ ವಿರೋಧಿಸಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಇಂದು ಹನ್ನೊಂದನೆ ದಿನಕ್ಕೆ ಕಾಲಿಟಿದ್ದು, ಕರ್ನಾಟಕ ರಕ್ಷಣಾ ವೇದಿಕೆಯ ಯುವ ಸೇನೆಯು ಬೆಂಬಲ ಸೂಚಿಸಿದೆ.
ಇಲ್ಲಿನ ಡಿಸಿ ಕಚೇರಿಯ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಪದಾಧಿಕಾರಿಗಳು ಪಾಲ್ಗೊಂಡು ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಓದಿ:ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಹೋರಾಟ: ಧರಣಿ ಸ್ಥಳಕ್ಕೆ ಸಚಿವ ಆನಂದ್ ಸಿಂಗ್ ಭೇಟಿ
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡೋದು ತರವಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಜಿಲ್ಲೆಯ ವಿಭಜನೆ ಮಾಡೋದನ್ನ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಈ ಕೂಡಲೇ ನೂತನ ವಿಜಯನಗರ ಜಿಲ್ಲೆ ಘೋಷಣೆಯನ್ನ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.