ಬಳ್ಳಾರಿ: ರಾಜ್ಯ ಸರ್ಕಾರವು ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿರುವುದನ್ನು ವಿರೋಧಿಸಿ ಇಂದು ಕರ್ನಾಟಕ ಜನಸೈನ್ಯ ಸಂಘಟನೆಯಿಂದ ತೆರೆದ ಅಂಚೆ ಚಳವಳಿಯನ್ನ ನಡೆಸಲಾಯಿತು.
ಬಳ್ಳಾರಿ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ಇಂದು ಈ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕೆ. ಎರಿಸ್ವಾಮಿ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ಈ ಚಳವಳಿಯಲ್ಲಿ ಪಾಲ್ಗೊಂಡು ಅಂಚೆ ಪತ್ರದ ಮೂಲಕ ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ ವ್ಯಕ್ತಪಡಿಸಿದರು. ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಈ ಅಂಚೆ ಚೀಟಿಗಳನ್ನ ರವಾನಿಸಿದ್ದಾರೆ.
ಜನಸೈನ್ಯ ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಬಿ. ಹೊನ್ನೂರಪ್ಪ, ಪದಾಧಿಕಾರಿಗಳಾದ ಲಕ್ಷ್ಮಿ ನಾರಾಯಣ ಶೆಟ್ಟಿ, ಚೆಂಚಯ್ಯ, ಫಯಾಜ್ ಭಾಷಾ, ನಾಸೀರ್, ರಾಧಾಕೃಷ್ಣ, ಮುರಳಿ, ಗುರುರಾಜ, ಚಿಟ್ಟಿ, ಆನಂದ, ಶ್ರೀನಿವಾಸ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.