ETV Bharat / state

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಭತ್ತ ಖರೀದಿಸಲು ತೀರ್ಮಾನ : ಡಿಸಿ ನಕುಲ್

author img

By

Published : Nov 25, 2020, 3:57 AM IST

ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್‍ಗೆ ರೂ.1868, ಗ್ರೇಡ್ ಎ ಭತ್ತಕ್ಕೆ 1888 ರೂ.ಗಳನ್ನು ಸರಕಾರ ನಿಗದಿಪಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮವು ಖರೀದಿ ಏಜೆನ್ಸಿಯಾಗಿದೆ. ರೈತರು ನ.30ರಿಂದ ಡಿ.30ರವರೆಗೆ ಭತ್ತ ಮಾರಾಟ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಡಿ.20ರಿಂದ 2021 ಮಾರ್ಚ್ 30ರವರೆಗೆ ಭತ್ತ ಖರೀದಿಸಲಾಗುತ್ತದೆ.

ಡಿಸಿ ಎಸ್.ಎಸ್.ನಕುಲ್
ಡಿಸಿ ಎಸ್.ಎಸ್.ನಕುಲ್

ಬಳ್ಳಾರಿ : 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ತದ ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಭತ್ತ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು. ಈ ರೀತಿ ಕೃಷಿ ಇಲಾಖೆ ಮತ್ತು ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡ ರೈತರು ಭತ್ತವನ್ನು ನಿಗಧಿಪಡಿಸಿರುವ ಅಕ್ಕಿ ಗಿರಣಿಗಳಿಗೆ, ಖರೀದಿ ಕೇಂದ್ರಗಳಿಗೆ ನೇರವಾಗಿ ಸರಬರಾಜು ಮಾಡಬೇಕು ಎಂದು ಅವರು ವಿವರಿಸಿದ್ದಾರೆ.

ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್‍ಗೆ ರೂ.1868 ರೂ, ಗ್ರೇಡ್ ಎ ಭತ್ತಕ್ಕೆ 1888 ರೂ.ಗಳನ್ನು ಸರಕಾರ ನಿಗದಿಪಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮವು ಖರೀದಿ ಏಜೆನ್ಸಿಯಾಗಿದೆ. ರೈತರು ನ.30ರಿಂದ ಡಿ.30ರವರೆಗೆ ಭತ್ತ ಮಾರಾಟ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಡಿ.20ರಿಂದ 2021 ಮಾರ್ಚ್ 30ರವರೆಗೆ ಭತ್ತ ಖರೀದಿಸಲಾಗುತ್ತದೆ.

ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಮತ್ತು ರೈತರು ನೋಂದಾವಣಿ ಮಾಡಿಕೊಳ್ಳಲು ಬಳ್ಳಾರಿ/ಕುರುಗೋಡು, ಸಿರಗುಪ್ಪ,ಸಂಡೂರು,ಕೂಡ್ಲಿಗಿ/ಕೊಟ್ಟೂರು, ಹೊಸಪೇಟೆ,ಕಂಪ್ಲಿ, ಎಚ್.ಬಿ.ಹಳ್ಳಿ, ಹಡಗಲಿ ಮತ್ತು ಹರಪನಳ್ಳಿ ಎಪಿಎಂಸಿ ಯಾರ್ಡ್‍ಗಳನ್ನು ಕೇಂದ್ರಗಳಾಗಿ ಗುರುತಿಸಲಾಗಿದೆ. ರೈತರಿಂದ ನೇರವಾಗಿ ಖರೀದಿಸುವ ಭತ್ತ ಸರಾಸರಿ ಉತ್ತಮ ಗುಣಮಟ್ಟದ್ದಾಗಿರಬೇಕು. ಅದಕ್ಕಾಗಿ ಗುಣಮಟ್ಟ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ವಿವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.