ETV Bharat / state

ಕೊರೊನಾ ಲಸಿಕೆ ಹಾಕಿಸಿಕೊಂಡ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ‌ ಜೋಗತಿ

ಜನರು ವದಂತಿಗಳಿಗೆ ಕಿವಿಗೊಡಬಾರದು. 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಪದ್ಮಶ್ರೀ ಪುರಸ್ಕೃತೆ ಮಂಜಮ್ಮ‌ ಜೋಗತಿ ಮನವಿ ಮಾಡಿದರು.

Manjamma Jogati gets Corona vaccine
ಕೊರೊನಾ ಲಸಿಕೆ ಹಾಕಿಸಿಕೊಂಡ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ‌ ಜೋಗತಿ
author img

By

Published : Apr 19, 2021, 11:25 AM IST

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಹಾಗೂ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ‌ ಜೋಗತಿ ಅವರು ಕೊರೊನಾ ಲಸಿಕೆ ಹಾಕಿಸಿಕೊಂಡರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಲಸಿಕೆಯಿಂದ ಯಾವುದೇ ದುಷ್ಪರಿಣಾಮವಾಗುವುದಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು. 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.

ಲಸಿಕೆ ಹಾಕಿಸಿಕೊಂಡ ಬಳಿಕ ಕೊರೊನಾ ಪತ್ತೆಯಾದರೂ ಸಹ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ. ಜನರು ತಪ್ಪದೇ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಮಂಜಮ್ಮ ಜೋಗತಿ ಸಲಹೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.