ಹೊಸಪೇಟೆ: ಐತಿಹಾಸಿಕ ಹಂಪಿಯನ್ನು ನೋಡಲು ಬರುವ ಪ್ರವಾಸಿಗರು, ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಾರೆ. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಅವಶ್ಯಕತೆಯಿದೆ. ಈ ಹಿನ್ನೆಲೆ ಉಪ ವಿಭಾಗದ ದಂಡಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರು ಸ್ಥಳ ಪರಿಶೀಲಿಸಿದರು.
ಹಂಪಿಯ ಗ್ರಾಮ ಪಂಚಾಯಿತಿ ಮುಂಭಾಗದ ಮೈದಾನದಲ್ಲಿ ಹಾಗೂ ವಿಜಯ ವಿಠ್ಠಲ ದೇವಾಲಯ ಸ್ಥಳದಲ್ಲಿ, ವಾಹನ ನಿಲುಗಡೆ ಪ್ರದೇಶ ಮಾಡುವ ಆಲೋಚನೆ ಇದೆ. ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತದೆ. ಇದನ್ನು ತಪ್ಪಿಸಲು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಹಂಪಿ ವಿಶ್ವ ಪರಂಪರೆಯ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಪಿ.ಎನ್. ಲೋಕೇಶ್, ತಹಸೀಲ್ದಾರ್ ಹೆಚ್.ವಿಶ್ವನಾಥ ಈ ಸಂದರ್ಭದಲ್ಲಿ ಇದ್ದರು.