ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಆಗಿ ಪವನ್ ಕುಮಾರ್ ಮಲಪಾಟಿ ಅವರು ಈ ದಿನ ಅಧಿಕಾರ ಸ್ವೀಕರಿಸಿದ್ದಾರೆ.
ಹಿಂದಿನ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ನೂತನ ಜಿಲ್ಲಾಧಿಕಾರಿ ಪವನ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಇನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ಎಸ್.ಎಸ್ ನಕುಲ್ ಬಡ್ತಿಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಪವನ್ ಕುಮಾರ್ ಮಾಲಪಾಟಿ ಅವರನ್ನು ನೇಮಕ ಮಾಡಲಾಗಿದೆ.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್ ಕುಮಾರ್ ಅವರು 2012ರ ಐಎಎಸ್ ಬ್ಯಾಚ್ನವರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್ನ ಅಡಿಷನಲ್ ಕಮಿಷನರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.