ಹೊಸಪೇಟೆ/ಬಳ್ಳಾರಿ: ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳುಹಿಸುವ ಪಾಲಕರಿಗೆ ದಂಡ ಹಾಕಲಾಗುವುದು ಎಂದು ಜಿಲ್ಲೆಯ ಕುರುಗೋಡು ತಾಲೂಕು ಕೋಳೂರು ಗ್ರಾಮದಲ್ಲಿ ಡಂಗುರ ಸಾರುವ ಮೂಲಕ ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ.
ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 9 ಮತ್ತು 10 ನೇ ತರಗತಿಯ ಒಟ್ಟು 184 ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆ ಪ್ರಾರಂಭವಾದ್ರು ಕೂಡ ವಿದ್ಯಾರ್ಥಿಗಳ ಹಾಜರಾತಿ 50 ದಾಟಿಲ್ಲ. ಇದು ಶಿಕ್ಷಕರಿಗೆ ತೆಲೆ ನೋವಾಗಿದ್ದು, ಮಕ್ಕಳನ್ನು ಶಾಲೆಗೆ ಹೇಗೆ ಕರೆಯಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರು ಸೇರಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಚರ್ಚಿಸುವ ವೇಳೆ ಮಕ್ಕಳನ್ನು ಪಾಲಕರು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೂಲಿ ಕೆಲಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋದ್ರೆ ದಂಡ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪ್ರತಿ ಓಣಿಯಲ್ಲೂ ಡಂಗುರ ಸಾರುವ ಮೂಲಕ ಮಾಹಿತಿ ನೀಡಲಾಗಿದೆ.