ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಸರಕಾರ ಲೌಕ್ಡೌನ್ ಮಾಡುತ್ತದೆ ಎಂಬ ಆತಂಕಕ್ಕೆ ಒಳಗಾದ ಜನರು ಮದ್ಯ ಕೊಳ್ಳಲು ಮುಗಿಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ.
ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮದ್ಯ ಖರೀದಿಗಾಗಿ ಬಂದಿದ್ದರು. ಹೀಗಾಗಿ ಮಾರಾಟ ಮಳಿಗೆಗಳಲ್ಲಿ ವ್ಯಾಪಾರ ಜೋರಾಗಿತ್ತು.