ಹೊಸಪೇಟೆ : ಇಲ್ಲಿರುವ ಬಂಕ್ವೊಂದರಲ್ಲಿ ಪೆಟ್ರೋಲ್ ಗೋಲ್ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಮಾಲೀಕ ಹಾಗೂ ಸಿಬ್ಬಂದಿ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಹಂಪಿ ರಸ್ತೆಯಲ್ಲಿರುವ ಶಂಕರ್ ಸರ್ವೀಸ್ ಸೆಂಟರ್ನಲ್ಲಿ ಗ್ರಾಹಕರು ಕೊಟ್ಟ ಹಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್, ಡಿಸೇಲ್ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಬಂಕ್ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಂಕ್ ಬಂದ್ ಮಾಡಿರುವ ಘಟನೆ ನಡೆದಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.