ವಿಜಯನಗರ : ಟಿಪ್ಪರ್ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಜಯ್ ಬಲಭೀಮ್, ಗಣೇಶ್ ಪಾಂಡುರಂಗ ನಕಾತೆ, ಪ್ರಶಾಂತ್ ಪಾಂಡುರಂಗ ನಕಾತೆ ಎಂಬುವರು ಬಂಧಿತ ಆರೋಪಿಗಳು. ಈ ಮೂವರು ಮಹಾರಾಷ್ಟ್ರ ಮೂಲದ ಖೆಡ್ ಜಿಲ್ಲೆಯವರೆಂದು ತಿಳಿದು ಬಂದಿದೆ.
ಇದೇ ತಿಂಗಳ 19ನೇ ತಾರೀಖಿನಂದು ಮರಿಯಮ್ಮನಹಳ್ಳಿ ಬಳಿಯ ಪಂಜಾಬಿ ಢಾಬಾದಲ್ಲಿ ಚಾಲಕರು ಟಿಪ್ಪರ್ ನಿಲ್ಲಿಸಿ ಊಟಕೆ ತೆರಳಿದ್ದರು. ಇದನ್ನು ಗಮನಿಸಿದ ಆರೋಪಿಗಳು 30 ಲಕ್ಷ ರೂ. ಬೆಲೆ ಬಾಳುವ ಎರಡು ಟಿಪ್ಪರ್ ಲಾರಿಗಳನ್ನು ಕಳ್ಳತನ ಮಾಡಿದ್ದಾರೆ.
ಘಟನೆ ಕುರಿತು ಚಾಲಕರು ಮರಿಯಮ್ಮನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಳಿಕ ಆರೋಪಿಗಳಿಗಾಗಿ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ, ಕೇವಲ ಐದೇ ದಿನಗಳಲ್ಲಿ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಿದ್ದಾರೆ. ಬಂಧಿತ ಮೂವರು ಆರೋಪಿಗಳಿಂದ ಎರಡು ಟಿಪ್ಪರ್ ಲಾರಿ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಡೇಟಿಂಗ್ ಆ್ಯಪಲ್ಲಿ ಪರಿಚಯವಾದ ಯುವತಿಗೆ ಮನಸೋತು 6 ಕೋಟಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್..!