ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇಂದು ಪೊಲೀಸರು ದಾಳಿ ನಡೆಸಿದ್ದಾರೆ.
ಲಾಡ್ಜ್ನಲ್ಲಿನ ಅಡಗುತಾಣದಲ್ಲಿ ನಡೆಸಲಾಗುತ್ತಿತ್ತು ಎನ್ನಲಾದ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಮೂವರು ಗಿರಾಕಿಗಳು ಹಾಗೂ ದಂಧೆಯಲ್ಲಿ ಭಾಗಿಯಾಗಿದ್ದ 06 ಜನ ಸೇರಿದಂತೆ ಒಟ್ಟು 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಟ್ಟೆ ಇಡುವ ಕಬೋರ್ಡ್ ಮಧ್ಯೆ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆಯನ್ನು ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ವಿಜಯನಗರ ಎಸ್ಪಿ ಡಾ. ಅರುಣ್ ಕೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ವಿಡಿಯೋ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಉಚಿತ ಪರೀಕ್ಷೆಗೆ ಹಣ ಪೀಕುವ ಸಿಬ್ಬಂದಿ?