ETV Bharat / state

ಅಲ್ಪಸಂಖ್ಯಾತ ಪ್ರದೇಶದ ಕುಡಿಯುವ ನೀರಿನ ಘಟಕಗಳಿಗೆ ಆದ್ಯತೆ ; ಅಪರ ಜಿಲ್ಲಾಧಿಕಾರಿ ಪಿ ಎಸ್‌ ಮಂಜುನಾಥ

ಪ್ರಧಾನಮಂತ್ರಿಗಳ ಹೊಸ 15 ಕಾರ್ಯಕ್ರಮಗಳ ಅನುಷ್ಠಾನದ ಅನ್ವಯ ವಿವಿಧ ಇಲಾಖೆಗಳ ಅಧಿಕಾರಿಗಳು ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಸಮಪರ್ಕ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು ಮತ್ತು ಈ ಕುರಿತು ಹೆಚ್ಚಿನ ಜಾಗೃತಿಯೂ ಮೂಡಿಸಬೇಕು..

prime minister 14 new plans
ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ
author img

By

Published : Sep 4, 2020, 10:26 PM IST

ಬಳ್ಳಾರಿ : ಅಲ್ಪಸಂಖ್ಯಾತ ಸಮುದಾಯದ ಜನ ವಾಸಿಸುವ ಪ್ರದೇಶಗಳಲ್ಲಿ 19 ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿವೆ. ಅವುಗಳಲ್ಲಿ 7ಕ್ಕೆ ಮಾತ್ರ ನಿವೇಶನ ಸಿಕ್ಕಿದೆ. ಉಳಿದವುಗಳಿಗೆ ಶೀಘ್ರ ನಿವೇಶನ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ ಎಸ್ ಮಂಜುನಾಥ್ ಸೂಚಿಸಿದರು.

prime minister 14 new plans
ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ 19 ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿವೆ. ಅವುಗಳಲ್ಲಿ 7ಕ್ಕೆ ಆರ್‌ ಪ್ಲಾಂಟ್ ಅಳವಡಿಸಲಾಗುತ್ತಿದೆ. ಉಳಿದವುಗಳಿಗೆ ನಿವೇಶನ ಸಮಸ್ಯೆ ಇದೆ ಎಂದು ಮುಂದೂಡಲಾಗಿತ್ತು. ಅಲ್ಪಸಂಖ್ಯಾತ ಇಲಾಖೆ, ಕೆಆರ್​ಐಡಿಎಲ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕು ಎಂದು ಸೂಚಿಸಿದರು.

ನಿವೇಶನ ಲಭ್ಯವಾದರೆ ತಕ್ಷಣ ಕಾರ್ಯ ಪ್ರವೃತ್ತರಾಗಬೇಕು. ಇಲ್ಲದಿದ್ದಲ್ಲಿ ನಮಗೆ ಮಾಹಿತಿ ನೀಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರಧಾನಮಂತ್ರಿಗಳ ಹೊಸ 15 ಕಾರ್ಯಕ್ರಮಗಳ ಅನುಷ್ಠಾನದ ಅನ್ವಯ ವಿವಿಧ ಇಲಾಖೆಗಳ ಅಧಿಕಾರಿಗಳು ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಸಮಪರ್ಕ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು ಮತ್ತು ಈ ಕುರಿತು ಹೆಚ್ಚಿನ ಜಾಗೃತಿಯೂ ಮೂಡಿಸಬೇಕು ಎಂದರು.

ಮುಂಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಪರಿಗಣಿಸಬೇಕು. ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಸಂಬಂಧಿಸಿದಂತೆ ಬ್ಯಾಂಕ್‍ಗಳಲ್ಲಿ ಆಧಾರ್ ಫೀಡಿಂಗ್ ಕಾರ್ಯ ಶೀಘ್ರ ಮುಗಿಸಲು ಸೂಚಿಸಿದರು. ಅಲ್ಪಸಂಖ್ಯಾತ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶಿಷ್ಯವೇತನ ಒದಗಿಸುವುದಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಎಡಿಸಿ ಮಂಜುನಾಥ ಅವರು, ಇನ್ನು ಮುಂದೆ ಸಮರ್ಪಕ ಮಾಹಿತಿ ನೀಡುವಂತೆ ಸಭೆಗೆ ಆಗಮಿಸಿದ ಶಿಕ್ಷಣ ಸಂಯೋಜಕರಿಗೆ ಸೂಚನೆ ನೀಡಿದರು.

ಕೃಷಿ, ಕೈಗಾರಿಕೆ, ತೋಟಗಾರಿಕೆ, ರೇಷ್ಮೆ ಶಿಕ್ಷಣ, ನಗರಾಭಿವೃದ್ಧಿ, ಪಶುಪಾಲನೆ, ಅಲ್ಪಸಂಖ್ಯಾತ ಕಲ್ಯಾಣ, ಕಾರ್ಮಿಕ ಇಲಾಖೆ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಅಗತ್ಯ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ನೀಡಿದರು. ಈ ಸಮಯದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಸಿದ್ದಪ್ಪ, ಪರಶುರಾಮ ಸೇರಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.