ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಬಳ್ಳಾರಿ ರಸ್ತೆಯಲ್ಲಿರುವ ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದಾರೆ.
ಲಾಡ್ಜ್ ವ್ಯವಸ್ಥಾಪಕ ಶ್ರೀನಿವಾಸ ಎಂಬುವರು ಹಣ ಸಂಪಾದನೆಗೆ ಬೇರೆ ಬೇರೆ ಊರುಗಳಿಂದ ಯುವತಿಯರನ್ನು ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗ್ತಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದಾರೆ. ಮ್ಯಾನೇಜರ್ ಶ್ರೀನಿವಾಸ್ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಹೊಸಪೇಟೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.