ಹೊಸಪೇಟೆ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆಗೈದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವಧ್ವನಿ ಒಕ್ಕೂಟ, ಭಾರತೀಯ ಮುಸ್ಲಿಂ ಮಹಿಳಾ ಆಂದೋಲನ, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬಡಕುಟುಂಬಗಳು ಮತ್ತು ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಸರ್ಕಾರಗಳು ನ್ಯಾಯದ ಪರ ನಿಲ್ಲುತ್ತಿಲ್ಲ. ಕೂಡಲೇ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಅಸಮಾನತೆಯನ್ನು ಕಿತ್ತು ಎಸೆಯಬೇಕು. ಗಂಡು-ಹೆಣ್ಣು ಭೇದ ಭಾವ ಇರಬಾರದು. ಈ ಕುರಿತು ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತಂದು ಸಾಮಾಜಿಕ ಅರಿವನ್ನು ಮೂಡಿಸಬೇಕು ಎಂದು ಒತ್ತಾಯಿಸಿದರು.