ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡಸಿ ಬಳ್ಳಾರಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಳ್ಳಾರಿ ಪತ್ರಕರ್ತರು, ಘಟನೆ ಕುರಿತು ಸಮಗ್ರ ತನಿಖೆಯಾಗಬೇಕು. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಜಾಪ್ರಭುತ್ವದ 4ನೇ ಅಂಗವನ್ನು ರಕ್ಷಿಸಬೇಕು. ಪ್ರತೀ ಬಾರಿ ಯಾವುದೇ ಘಟನೆ ನಡೆದರೂ ಪತ್ರಕರ್ತರ ಮೇಲೆ ಹಲ್ಲೆಯಾಗ್ತಿದೆ. ಇದಕ್ಕೆ ಇತಿಶ್ರೀ ಹಾಡುವ ಕಾನೂನು ತರಬೇಕೆಂದು ಒತ್ತಾಯಿಸಿದರು.