ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ಎಸ್ಟಿ ಮತ್ತು ಎಸ್ಸಿ ವಿದ್ಯಾರ್ಥಿಗಳು ಫೆಲೋಶಿಪ್ ನೀಡುವವರೆಗೂ ಧರಣಿಯನ್ನು ಮಾಡುತ್ತೇವೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ಈ ಹಿಂದೆ ಅನೇಕ ಬಾರಿ ಪತ್ರದ ಮೂಲಕ ಸಂಶೋಧನಾ ವಿದ್ಯಾರ್ಥಿಗಳು ಕುಲಪತಿಗೆ ಮನವಿ ಸಲ್ಲಿಸಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಆದ್ದರಿಂದ ಈ ಪ್ರತಿಭಟನೆಗೆ ನಿರ್ಧಾರ ಮಾಡಿ ಮೌಖಿಕವಾಗಿ ಮಾತನಾಡಲು ಬಂದಿದ್ದೇವೆ ಎಂದು ವಿದ್ಯಾರ್ಥಿಗಳು ಈಟಿವಿ ಭಾರತದ ಜೊತೆ ಫೋನ್ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕುಲಪತಿ ಸ.ಚಿ.ರಮೇಶ ಕುಮಾರ್ ಮತ್ತು ಕುಲಸಚಿವ ಪ್ರೊ. ಸುಬ್ಬರಾವ್ ಬೆಂಗಳೂರಿಗೆ ಮೀಟಿಂಗ್ಗೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.