ETV Bharat / state

ಗ್ಯಾಸ್ ಬೆಲೆ ಏರಿಕೆಗೆ ಖಂಡನೆ: ಕಟ್ಟಿಗೆ ಒಲೆಯಲ್ಲಿ ಟೀ ತಯಾರಿಸಿ, ಹಂಚಿ ಪ್ರತಿಭಟನೆ - ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

DYFI ಸಂಘಟನೆಯ ನೇತೃತ್ವದಲ್ಲಿ ಮುಖಂಡರು ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಕಟ್ಟಿಗೆಯ‌ ಒಲೆಯಲ್ಲಿ ಟೀ ಮಾಡುವ ಮೂಲಕ ಕೇಂದ್ರ ಸರಕಾರ ಗ್ಯಾಸ್ ಬೆಲೆ ಏರಿಸಿರುವುದನ್ನು ಖಂಡಿಸಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

Protest condemning gas price hike in Hosapete
ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
author img

By

Published : Jul 7, 2021, 7:34 PM IST

ಹೊಸಪೇಟೆ(ವಿಜಯನಗರ): ಕೇಂದ್ರ ಸರಕಾರ ಗ್ಯಾಸ್ ಬೆಲೆ ಏರಿಸಿರುವುದನ್ನು ಖಂಡಿಸಿ DYFI ಸಂಘಟನೆಯ ನೇತೃತ್ವದಲ್ಲಿ ಮುಖಂಡರು ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಕಟ್ಟಿಗೆ ಒಲೆಯಲ್ಲಿ ಟೀ ಮಾಡುವ ಪ್ರತಿಭಟನೆ ನಡೆಸಿದರು.

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಿಸಾಟಿ ಮಹೇಶ್ ಮಾತನಾಡಿ, ಕೊರೊನಾ ಸೋಂಕು ಸಾಮಾನ್ಯ ಜನತೆಯ ಬದುಕನ್ನು ಕಸಿದುಕೊಂಡಿರುವ ಈ ಕರಾಳ ಸಂದರ್ಭದಲ್ಲೇ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪೆಟ್ರೋಲ್​-ಡೀಸೆಲ್​ ಬೆಲೆ, ಧಾನ್ಯಗಳ ಬೆಲೆ, ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆ ಹಾಗೂ ಅಡುಗೆ ಎಣ್ಣೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಬದುಕು ನಡೆಸುವುದೇ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರ್ಷದ ಆರಂಭದಿಂದ ಮೇಲಿಂದ ಮೇಲೆ ದರ ಹೆಚ್ಚಳವಾಗುತ್ತಿರುವ, ಸಿಲಿಂಡರ್ ಬೆಲೆ ಈಗ 25 ರೂ ಹೆಚ್ಚಳದೊಂದಿಗೆ 826 ರೂ ಆಗಿದ್ದು, ಈ ತಿಂಗಳಲ್ಲೇ 1000 ರೂಪಾಯಿ ಆಗಲಿದೆ ಅನ್ನೋ ಆತಂಕ ಶುರುವಾಗಿದೆ. ಇನ್ನು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 96 ರೂಪಾಯಿ ಏರಿಕೆಯಾಗಿದೆ.

ಇದೀಗ ಕಮರ್ಷಿಯಲ್ ಸಿಲಿಂಡರ್ ದರ 1,666 ರೂಪಾಯಿ ಆಗಿದೆ. ಬಿಜೆಪಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾಸ್, ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದರಿಂದ ಜನ ಸಾಮಾನ್ಯರು ಜೀವನ ನಡೆಸಲು ತೊಂದರೆಯಾಗಿದೆ. ತಕ್ಷಣವೇ ಮೋದಿ ಸರ್ಕಾರ ಗ್ಯಾಸ್ ,ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ : 35ನೇ ವಯಸ್ಸಿಗೆ ಕೇಂದ್ರ ಸಚಿವ ಸ್ಥಾನ! ಶಾಲಾ ಶಿಕ್ಷಕನಾಗಿ ಸಂಸದನಾದ ಯುವಕನಿಗೆ ಮೋದಿ ಮಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.