ETV Bharat / state

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ: ನೂರಾರು ವಿದ್ಯಾರ್ಥಿಗಳಿಂದ ಪ್ರತಿಭಟನೆ - bellary protest latest news

ಹೈದರಾಬಾದ್​​ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯ್ತು.

protest
ವಿದ್ಯಾರ್ಥಿಗಳಿಂದ ಪ್ರತಿಭಟನೆ
author img

By

Published : Dec 2, 2019, 7:54 PM IST

ಬಳ್ಳಾರಿ: ಹೈದರಾಬಾದ್​​ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಿಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.

ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿ ನಂತರ ಮೀನಾಕ್ಷಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅತ್ಯಾಚಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು. ಸಮಾಜದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಇಲ್ಲಿಯ ಕಾನೂನು, ಸರ್ಕಾರದ ನಿರ್ಲಕ್ಷ್ಯದಿಂದ ಹೆಚ್ಚಾಗಿವೆ ಎಂದು ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎ.ಶಾಂತ ದೂರಿದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಿರ್ಭಯಾ ಪ್ರಕರಣದ ನಂತರ ರಚನೆಯಾದ ವರ್ಮ ಸಮಿತಿ ಶಿಫಾರಸುಗಳನ್ನು ಜಾರಿ ಮಾಡಿದ್ರೆ ಮಾತ್ರ ಈ ರೀತಿ ಅತ್ಯಾಚಾರ, ಕೊಲೆ ಮಾಡುವವರಿಗೆ ಸರಿಯಾದ ಪಾಠ ಕಲಿಸಿದಂತೆ ಆಗುತ್ತದೆ ಎಂದರು.‌

Intro:
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಆಗಲಿ : ನೂರಾರು ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಸಮಾಜದಲ್ಲಿ ಯುವತಿಯರ, ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳ ಸಾಕಷ್ಟು ನಡೆಯುತ್ತಿವೆ ಆದ್ರೆ ಇಲ್ಲಿಯ ಕಾನೂನು, ಸರ್ಕಾರದ ನಿಲಕ್ಷ್ಯ ಹೆಚ್ಚಾಗಿವೆ ಎಂದು ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎ.ಶಾಂತ ದೂರಿದರುBody:.

ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿ ನಂತರ ಮೀನಾಕ್ಷಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ನೂರಾರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಅತ್ಯಾಚಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.

ಹೈದರಾಬಾದ್ ನ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿದವನ್ನು ಗಲ್ಲಿಗೆ ಏರಿಸಿ ಬೇಕೆಂದು ( ಎ.ಐ.ಎಂ.ಎಸ್.ಎಸ್) ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘನೆ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.

ನಿರ್ಭಯ ಪ್ರಕರಣದ ನಂತರ ವರ್ಮ ಸಮಿತಿ ಆಯೋಗ ಶಿಪಾರಸ್ಸು ಜಾರಿಗೆ ಮಾಡಿದ್ರೇ ಮಾತ್ರ ಈ ರೀತಿ ಅತ್ಯಾಚಾರ, ಕೊಲೆ ಮಾಡುವವರಿಗೆ ಸರಿಯಾದ ಪಾಠ ಕಲಿಸಿದಂತೆ ಆಗುತ್ತದೆ ಎಂದರು.‌

Conclusion:ಈ ಪ್ರತಿಭಟನೆಯಲ್ಲಿ ಸಂಘಟನೆಯ ಡಾ.ಪ್ರಮೋದ್ , ಸುರೇಶ್, ಈಶ್ವರಿ, ರವಿಬಕಿರಣ್, ವಿದ್ಯಾ, ಪದ್ಮ,
ಶಾಂತ ಮತ್ತು ನೂರಾರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.