ETV Bharat / state

ಹೊಸಪೇಟೆ: ನ್ಯಾಯಕ್ಕಾಗಿ ಯುವಕನ ಶವ ಇಟ್ಟು ಪ್ರತಿಭಟನೆ - hospete ballary latest news

ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ ನೇಣಿಗೆ ಹಾಕಿದ್ದಾರೆ ಅನ್ನೋದು ಗ್ರಾಮಸ್ಥರ ಆರೋಪ. ಹೀಗಾಗಿ ಈ ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

Protest with the corpse of a young man for justice
ಹೊಸಪೇಟೆ: ನ್ಯಾಯಕ್ಕಾಗಿ ಯುವಕನ ಶವ ಇಟ್ಟುಕೊಂಡು ಪ್ರತಿಭಟನೆ
author img

By

Published : Dec 5, 2020, 10:44 AM IST

Updated : Dec 5, 2020, 11:35 AM IST

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿ ತಾಂಡದಲ್ಲಿ ಕಿರಣ್ ಕುಮಾರ ನಾಯ್ಕ (18) ಎಂಬ ಯುವಕನ ಶವ ಇಟ್ಟುಕೊಂಡು ನ್ಯಾಯಕ್ಕಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶವ ಇಟ್ಟು ಪ್ರತಿಭಟನೆ

ಮೃತ ಯುವಕ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜೆಸಿಬಿ ಯತ್ರದಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ. ಆತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ನೇಣಿಗೆ ಹಾಕಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ಕೃತ್ಯ ಎಸಗಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ಓದಿ: ಕರ್ನಾಟಕ ಬಂದ್.. ಬಿಬಿಎಂಪಿ ಕಚೇರಿ ಮುಂಭಾಗ ಪೊಲೀಸರ ಸರ್ಪಗಾವಲು

ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಜೊತೆಗೆ ಯುವಕನ ಕುಟುಂಬಕ್ಕೆ ಪರಿಹಾರವನ್ನೂ ನೀಡಬೇಕೆಂದು ಒತ್ತಾಯಿಸಿದರು. ‌ಕೂಲಿ ಕಾರ್ಮಿಕರಿಗೆ ರಕ್ಷಣೆ ಇಲ್ಲದಂತಾಗಿದ್ದು, ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Last Updated : Dec 5, 2020, 11:35 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.