ETV Bharat / state

ಗಣಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಿನ್ನೆ 2,322 ಸೋಂಕಿತರು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗಿವೆ. ಪರಿಣಾಮವಾಗಿ ಉಭಯ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್ ಘೋಷಿಸಲಾಗಿದೆ.

red alert announced, red alert announced on Bellary and Vijayanagar, Bellary corona report, vijayanagar corona report, ರೆಡ್​ ಅಲರ್ಟ್​ ಘೋಷಣೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ರೆಡ್​ ಅಲರ್ಟ್​ ಘೋಷಣೆ, ಬಳ್ಳಾರಿ ಕೊರೊನಾ ವರದಿ, ವಿಜಯನಗರ ಕೊರೊನಾ ವರದಿ,
ಗಣಿನಾಡು‌ ಬಳ್ಳಾರಿಯಲ್ಲಿ ಇಂದು 2322 ಸೋಂಕಿತರು ಪತ್ತೆ
author img

By

Published : May 18, 2021, 9:42 AM IST

ಬಳ್ಳಾರಿ: ಮಹಾಮಾರಿ ಕೊರೊನಾ ಎರಡನೇ ಅಲೆಯ ಪ್ರಮಾಣ ಹೆಚ್ಚಳವಾಗುತ್ತಿದ್ದು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳು ಇದೀಗ ರೆಡ್ ಅಲರ್ಟ್​ನಲ್ಲಿವೆ. ಉಭಯ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ಶೇ. 47 ರಷ್ಟಿದೆ.

ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ನೇತೃತ್ವದಲ್ಲಿ ಮುಖ್ಯಮಂತ್ರಿ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಿತು. ಈ ವೇಳೆ ಅಧಿಕಾರಿಗಳು ಜಿಲ್ಲೆಯ ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.

ಗಣಿಜಿಲ್ಲೆಗಳಲ್ಲಿ ಕೊರೊನಾ ರೆಡ್ ಅಲರ್ಟ್

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆನಂದಸಿಂಗ್, ಇನ್ಮುಂದೆ ವಾರದಲ್ಲಿ ಮೂರು ದಿನಗಳ ಅವಧಿಗೆ ಲಾಕ್ ಡೌನ್ ಸಡಿಲಿಕೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ಅಂತಿಮ‌ ನಿರ್ಧಾರ ಕೈಗೊಂಡಿಲ್ಲ. ಯಾಕಂದ್ರೆ ಸಾಧಕ-ಬಾಧಕ ನೋಡಿಕೊಂಡು ತೀರ್ಮಾನಿಸಿದ್ರೆ ಸೂಕ್ತ ಎಂಬ ಅಭಿಪ್ರಾಯ ಬಂದಿದ್ದು ಸದ್ಯದ ಮಟ್ಟಿಗೆ ಯಥಾಸ್ಥಿತಿ ಇರಲಿದೆ ಎಂದು ತಿಳಿಸಿದರು.

ಹೋಂ ಐಸೋಲೇಷನ್​ನಲ್ಲಿ ಇರುವುದರಿಂದಲೇ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ನೀಡಿದ್ದೆವು. ಈ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್​ನಲ್ಲಿ ಇದ್ದವರನ್ನು ಕೋವಿಡ್ ಕೇರ್ ಸೆಂಟರ್​ಗೆ ಶಿಫ್ಟ್ ಮಾಡೋ ಕಾರ್ಯ ಶೀಘ್ರವೇ ಜಾರಿಗೆ ಬರಲಿದೆ ಎಂದರು.

ಜಿಲ್ಲಾ ಖನಿಜ ನಿಧಿಯಿಂದ ಬಳ್ಳಾರಿ ಜಿಲ್ಲೆಯ ಕುರುಗೋಡು, ಕಂಪ್ಲಿ ಹಾಗೂ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲ. ಹೀಗಾಗಿ ಅಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಸೇರಿದಂತೆ ಆರೋಗ್ಯ ಸೇವೆಯನ್ನ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಗಣಿನಾಡು‌ ಬಳ್ಳಾರಿಯಲ್ಲಿ 2,322 ಸೋಂಕಿತರು ಪತ್ತೆ

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಿನ್ನೆ 2,322 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 17 ಜನರು ಮೃತಪಟ್ಟಿದ್ದಾರೆ. 76,728 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದರೆ, ಮೃತರ ಸಂಖ್ಯೆ 1,090 ತಲುಪಿದೆ. 56,265 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಇನ್ನೂ 19,373 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ- 842, ಸಂಡೂರು- 200, ಸಿರುಗುಪ್ಪ- 117, ಹೊಸಪೇಟೆ- 631, ಎಚ್.ಬಿ.ಹಳ್ಳಿ- 91, ಕೂಡ್ಲಿಗಿ - 181, ಹರಪನಹಳ್ಳಿ- 94, ಹಡಗಲಿ- 157 ಮತ್ತು ಹೊರ ರಾಜ್ಯದಿಂದ 7 ಮತ್ತು ಹೊರ ಜಿಲ್ಲೆಯಿಂದ 2 ಕೊರೊನಾ ಪ್ರಕರಣಗಳು ಸೇರಿ ನಿನ್ನೆ 2,322 ಕೋವಿಡ್​ ಸೋಂಕಿತರು ಪತ್ತೆಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.