ಹೊಸಪೇಟೆ: ಹೂವಿನಹಡಗಲಿಯ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ತಿಕೋತ್ಸವ ಹಿನ್ನೆಲೆ ಭದ್ರಾ ಜಲಾಶಯದಿಂದ ಇಂದು ನೀರು ಹರಿಸಲಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಅಧಿಕಾರಿಕಾರಿಗಳು ಸೂಚಿಸಿದ್ದಾರೆ.

ಇಂದು ರಾತ್ರಿಯಿಂದ ಅವಶ್ಯಕತೆಗೆ ಅನುಗುಣವಾಗಿ ನದಿಗೆ ನೀರು ಹರಿಬಿಡಲಾಗುತ್ತದೆ. ನದಿಗೆ ನೀರು ಬಿಡುವುದರಿಂದ ನದಿಯ ಎರಡೂ ದಂಡೆಯ ಜನ ಎಚ್ಚರಿಕೆಯಿಂದ ಇರಬೇಕು. ಜನ, ಜಾನುವಾರುಗಳು ನದಿಗೆ ಇಳಿಯದಂತೆ ಭದ್ರಾ ಜಲಾಶಯದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.